ಸುಕಾಂತ್ಯಗೊಂಡ ಗ್ರಾಮ ಪಂಚಾಯತ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ…! ಶುರುವಾಯಿತು ಅಧ್ಯಕ್ಷೆ ರೇಸಿನಲ್ಲಿದ್ದ ಸದಸ್ಯನಲ್ಲಿ ಢವಢವ…!!!

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ಜಿಲ್ಲಾ ಸುದ್ದಿಗಳು

ಮುದ್ದೇಬಿಹಾಳ:

CHETAN KENDULI

ತಾಲೂಕಿನ 21 ಗ್ರಾಮ ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲಾತಿ ಪ್ರಕ್ರೀಯೆಯನ್ನು ಶುಕರವಾರ ಪಟ್ಟಣಕ್ಕೆ ಆಗಮಿಸಿದ ಜಿಲ್ಲಾಅಧಿಕಾರಿ ಪಿ.ಸುನೀಲಕುಮಾರ ಅವರು ಇಲ್ಲಿನ ಡಾ. ಅಂಬೇಡ್ಕರ್ ಭವನದಲ್ಲಿ ಪೂರ್ಣಗೊಳಿಸಿದರು.


ಚುನಾವಣೆ ನಡೆದಿದ್ದು 20, ಮೀಸಲಾತಿ ಪ್ರಕ್ರೀಯೆಯಾಗಿದ್ದು 21 ಪಂಚಾಯತಿಗೆ:
ಮುದ್ದೇಬಿಹಾಳ ತಾಲೂಕಿನ ಒಟ್ಟು 21 ಪಂಚಾಯತಿಗಳಲ್ಲಿ ಇಂಗಳಗೇರಿ ಗ್ರಾಮ ಪಂಚಾಯತಿ ಚುನಾವಣೆಯು ಹಲವು ವರ್ಷಗಳ ಹಿಂದೆ ನ್ಯಾಯಾಲಯ ಮೇಟ್ಟಿಲೇರಿದ ಪ್ರಕರಣ ಮುಗಿದು ಪಂಚಾಯತಿಯ ಚುನಾವಣೆಯು 2019ರಲ್ಲಿಯೇ ಮುಗಿದು ಆಯ್ಕೆಯಾದ ಸದಸ್ಯರಿಗೆ 5 ವರ್ಷದ ಸದಸ್ಯತ್ವ ನೀಡಲಾಗಿತ್ತು. ಆದ್ದರಿಂದ 2020ರ ಚುನಾವಣೆಯಲ್ಲಿ ಇಂಗಳಗೇರಿ ಪಂಚಾಯತಿಗೆ ಚುನಾವಣೆ ನಡೆಯಲಿಲ್ಲ. ಆದರೆ ಶುಕ್ರವಾರ 2020ರ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಪ್ರಕ್ರೀಯೆಯಲ್ಲಿ ಇಂಗಳಗೇರಿ ಗ್ರಾಮ ಪಂಚಾಯತಿಗೂ ಮೀಸಲು ಮಾಡಿದ್ದು ವಿವಿಧ ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿತು.




20 ಪಂಚಾಯತಿಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ:
ತಾಲೂಕಿನ ಕವಡಿಮಟ್ಟಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಅ, ಉಪಾಧ್ಯಕ್ಷ ಸ್ಥಾನವು ಎಸ್‌ಸಿ ಮಹಿಳೆ, ಹಿರೇಮುರಾಳ ಪಂಚಾಯತಿಯ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸ್ಥಾನವು ಎಸ್‌ಸಿ, ನಾಗಬೇನಾಳ ಪಂಚಾಯತಿಯ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಅ ಮಹಿಳೆ, ಉಪಾಧ್ಯಕ್ಷ ಸ್ಥಾನವು ಎಸ್‌ಸಿ, ಕುಂಟೋಜಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬ, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಅ ಮಹಿಳಾ, ಅಡವಿ ಸೋಮನಾಳ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ, ಉಪಾಧ್ಯಕ್ಷ ಸ್ಥಾನವು ಎಸ್‌ಸಿ ಮಹಿಳೆ, ಹುಲ್ಲೂರ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಕಾಳಗಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ, ಉಪಾಧ್ಯಕ್ಷ ಸ್ಥಾನವು ಎಸ್‌ಸಿ ಮಹಿಳೆ, ತಂಗಡಗಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಅ ಮಹಿಳೆ, ಆಲೂರ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ, ಉಪಾಧ್ಯಕ್ಷ ಸ್ಥಾನವು ಹಿಂದುಳಿದ ವರ್ಗ ಬ, ಬಿಜ್ಜೂರ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಮಡಿಕೇಶ್ವರ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ, ಬಿದರಕುಂದಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನವು ಎಸ್‌ಟಿ ಮಹಿಳೆ, ಹಡಲಗೇರಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ, ಕೋಳೂರ ಪಂಚಾಯತಿಯ ಅಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ, ಬಸರಕೋಡ ಪಂಚಾಯತಿಯ ಅಧ್ಯಕ್ಷ ಸ್ಥಾನವು ಎಸ್‌ಸಿ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಯರಝರಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಎಸ್‌ಸಿ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ಮಹಿಳೆ, ಢವಳಗಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಎಸ್‌ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ, ರಕ್ಕಸಗಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಎಸ್‌ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ, ನಾಗರಬೆಟ್ಟ ಪಂಚಾಯತಿಯ ಅಧ್ಯಕ್ಷ ಸ್ಥಾನವು ಎಸ್‌ಸಿ ಮಹಿಳೆ, ಉಪಾಧ್ಯಕ್ಷ ಸ್ಥಾನವು ಹಿಂದುಳೀದ ವರ್ಗ ಅ, ರೂಢಗಿ ಪಂಚಾಯತಿಯ ಅಧ್ಯಕ್ಷ ಸ್ಥಾನವು ಎಸ್‌ಟಿ ಮಹಿಳೆ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ, ಇಂಗಳಗೇರಿ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳು ಸಾಮಾನ್ಯ ಮಹಿಳೆಗೆ ಮೀಸಲಾತಿ ಮಾಡಲಾಯಿತು.

Be the first to comment

Leave a Reply

Your email address will not be published.


*