ಬೆಂಗಳೂರು: ಇಂದು ಸಂಜೆ ಬಿ.ಎಸ್. ಯಡಿಯೂರಪ್ಪ ರಾಜ್ಯದ 31ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ಸಿನ ನಾಯಕರು ಹಾಗೂ ಕಾರ್ಯಕರ್ತರು ಭಾಗವಹಿಸಬಾರದು ಅಂತಾ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟ್ವೀಟ್ ಮೂಲಕ ಸೂಚನೆ ನೀಡಿದ್ದಾರೆ.
ಇನ್ನು, ಟ್ವೀಟ್ನಲ್ಲಿ ಯಡಿಯೂರಪ್ಪನವರ ಮೇಲೆ ಕಿಡಿಕಾರಿರುವ ದಿನೇಶ್ ಗುಂಡೂರಾವ್, ಕುದುರೆ ವ್ಯಾಪಾರ ಮತ್ತು ಭ್ರಷ್ಟಚಾರದ ಮೇಲೆ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಇದು ಅಸಂವಿಧಾನಿಕ ಮತ್ತು ಅನೈತಿಕ. ಈ ಅಪವಿತ್ರ ಕಾರ್ಯಕ್ರಮದಲ್ಲಿ ಭಾಗವಹಿಸಲು ನಾನು ನಿರಾಕರಿಸುತ್ತೇನೆ, ಪಕ್ಷದ ಎಲ್ಲಾ ನಾಯಕರುಗಳಿಗೆ ಭಾಗವಹಿಸದಂತೆ ಸೂಚನೆ ನೀಡುತ್ತೇನೆ ಎಂದು ಹೇಳಿದ್ದಾರೆ.
Be the first to comment