ತಾಪಂ ಹಾಗೂ ಜಿಪಂ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರಗಳ ಪುನರ್ ವಿಂಗಡಣೆಗೆ ಆದೇಶ…! ಮತ್ತೆ ಶುರುವಾಯಿತು ರಾಷ್ಟ್ರೀಯ ಪಕ್ಷಗಳ ಪ್ರತಿಷ್ಠೆಯ ಕಣ…!!!

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ಜಿಲ್ಲಾ ಸುದ್ದಿಗಳು

ಮುದ್ದೇಬಿಹಾಳ:

CHETAN KENDULI

ಮುಂಬರುವ ತಾಲೂಕ ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ ಸಾರ್ವತ್ರಿಕ ಚುನಾವಣೆಯಲ್ಲಿ ಗ್ರಾಮೀಣ ಪ್ರದೇಶಗಳನ್ನು ಮಾತ್ರ ಪರಿಗಣಿಸಿ ಫೆ.19ರೊಳಗೆ ಕ್ಷೇತ್ರಗಳನ್ನು ಪುನರ್ ವಿಂಗಡಣೆ ಮಾಡಲು ರಾಜ್ಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿಗಳು ವಿಜಯಪುರ ಜಿಲ್ಲಾಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಈಗಾಗಲೇ ಜಿಲ್ಲಾಧಿಕಾರಿಗಳು ಸಂಬಂಧಿಸಿದ ತಾಲೂಕಾ ತಹಸೀಲ್ದಾರ ಅವರಿಗೆ ಕ್ಷೇತ್ರಗಳ ಪುನರ್ ವಿಂಗಡಣೆ ಮಾಡಲು ಸೂಚಿಸಿದ್ದು ಸ್ಥಳೀಯ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಆದೇಶ ಪಾಲನೆ ಮಾಡುತ್ತಿದ್ದಾರೆ.

ಟಿಕೆಟಗಾಗಿ ಲಭಿ:

ಈಗಲೇ ಸಜ್ಜಗುತ್ತಿರುವ ರಾಜಕೀಯ ವ್ಯಕ್ತಿಗಳು ತಾಲೂಕ ಪಂಚಾಯತ ಹಾಗೂ ಜಿಲ್ಲಾ ಪಂಚಾಯತ ಕ್ಷೇತ್ರಗಳಲ್ಲಿನ ಟಿಕೇಟಗಾಗಿ ರಾಜಕೀಯ ಪಕ್ಷಗಳ ಮುಖಂಡರಿಗೆ ಲಭಿ ಮಾಡುತ್ತಿದ್ದಾರೆ.

ಜಿಪಂ, ತಾಪಂ ನಲ್ಲೂ ಮೇಲಾಗುವುದಾ ಕಾಂಗ್ರೆಸ್:

ಈಗಾಗಲೇ ಮುದ್ದೇಬಿಹಾಳ ಕ್ಷೇತ್ರದ ಗ್ರಾಮ ಪಂಚಾಯತ ಚುನಾವಣೆಯಲ್ಲಿ ಆಡಳಿತರೂಡಿ ಬಿಜೆಪಿ ಪಕ್ಷಕಿಂತಲೂ ಹೆಚ್ಚು ಪಂಚಾಯತಗಳನ್ನು ವಿಷಪಡಿಸಿಕೊಂಡಿರುವ ಕಾಂಗ್ರೆಸ್ ಪಕ್ಷವು ಬರುವ ತಾಪಂ ಹಾಗೂ ಜಿಪಂ ಚುನಾವಣೆಯಲ್ಲೂ ಮೇಲುಗೈ ಸಾಧಿಸುವುದಾ ಎನ್ನುವುದು ಕಾದು ನೋಡಬೇಕಿದೆ.

Be the first to comment

Leave a Reply

Your email address will not be published.


*