ರಾಷ್ಟ್ರೀಯ ಸುದ್ದಿಗಳು
ನವದಹಲಿ:
ರಾಜ್ಯಸಭೆಯ ವಿಪಕ್ಷ ನಾಯಕರನ್ನಾಗಿ ಆಯ್ಕೆ ಮಾಡಿದ್ದು ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಭರ್ಜರಿ ಕೊಡುಗೆಯನ್ನು ಕಾಂಗ್ರೆಸ್ ಹೈಕಮಾಂಡ್ ನೀಡಿದೆ.
ಈ ಸಂಬಂಧ ಕಾಂಗ್ರೆಸ್ ಹೈಕಮಾಂಡ್ ರಾಜ್ಯಸಭೆ ಸಭಾಧ್ಯಕ್ಷರಿಗೆ ಪತ್ರ ಬರೆದಿದ್ದು, ವಿಪಕ್ಷ ನಾಯಕರಾಗಿದ್ದ ಗುಲಾಂ ನಬೀ ಆಜಾದ್ ಅವಧಿ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ ಅವರಿಂದ ತೆರವಾದ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಅವರನ್ನು ನೇಮಕ ಮಾಡಲಾಗಿದೆ ಎಂದು ತಿಳಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ್ದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈ ಮೂಲಕ ಕಾಂಗ್ರೆಸ್ ಹೈಕಮಾಂಡ್ ಭರ್ಜರಿ ಗಿಫ್ಟ್ ನೀಡಿದೆ.
Be the first to comment