ಬೇವಿನಮಟ್ಟಿಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ಸರ್ಕಾರದ ನಿರ್ದೆಶನದಂತೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಎಂಬಂತೆ ಸಣ್ಣ ಪುಟ್ಟ ಕೆಲಸಗಳಿಗೆ ಸಾರ್ವಜನಿಕರು ಸರ್ಕಾರಿ ಕಛೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಪ್ರತಿ ತಿಂಗಳು 3ನೇ ಶನಿವಾರ ತಾಲೂಕಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು ಗ್ರಾಮ ವಾಸ್ತವ್ಯ ಮಾಡಲಿದ್ದಾರೆ.

ಈ ತಿಂಗಳಿನ 3ನೇ ಶನಿವಾರ ಫೆ.20 ರಂದು ಹುನಗುಂದ ತಾಲೂಕಿನ ಬೇವಿನಮಟ್ಟಿ ಗ್ರಾಮವನ್ನು ಆಯ್ಕೆಮಾಡಲಾಗಿದ್ದು, ಆ ಗ್ರಾಮದಲ್ಲಿ ಅಧಿಕಾರಿಗಳು ವಾಸ್ತವ್ಯ ಮಾಡಲಿದ್ದಾರೆ. ಹಳ್ಳಿಗಳಿಗೆ ಭೇಟಿ ನೀಡುವ ಅಧಿಕಾರಿಗಳು ಸರ್ಕಾರಿ ಶಾಲೆಗಳಲ್ಲಿ ಪರಿಶಿಷ್ಟ ಜಾತಿ, ಪಂಗಡದ ವಸತಿ ನಿಲಯಗಳಲ್ಲಿ ಊಟ ಮಾಡಲಿದ್ದಾರೆ. ಭೇಟಿ ನೀಡುವ ಒಂದು ವಾರದ ಮೊದಲೆ ಅಧಿಕಾರಿಗಳು ಕಾರ್ಯಸೂಚಿಗಳ ಅನ್ವಯ ಫಲಾನುಭವಿಗಳ ಅರ್ಜಿಗಳನ್ನು ಸಂಗ್ರಹಿಸಿ ಯಾವ ಹಂತದಲ್ಲಿ ಕ್ರಮ ತೆಗೆದುಕೊಳ್ಳಬೇಕು ಎಂಬ ಪ್ರಕ್ರಿಯೆ ಪೂರ್ಣಗೊಳಿಸಿ ಭೇಟಿ ನೀಡಿದಾಗ ವಿಲೇವಾರಿ ಮಾಡಲಿದ್ದಾರೆ ಎಂದು ಹುನಗುಂದ ತಹಶೀಲ್ದಾರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*