ಯುವ ವಿಜ್ಞಾನಿ ಪ್ರಶಸ್ತಿ ಪ್ರಧಾನ ಸಮಾರಂಭ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ರಾಜ್ಯ ವಿಜ್ಞಾನ ಪರಿಷತ್ತು, ವಿಜ್ಞಾನ ಮತ್ತು ತಂತ್ರಜ್ಞಾನ, ಪದವಿ ಪೂರ್ವ ಶಿಕ್ಷಣ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಕೋರ್ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಫೆಬ್ರವರಿ 20 ರಂದು ಜಿಲ್ಲಾ ಮಟ್ಟದ ಯುವ ವಿಜ್ಞಾನಿ ಪ್ರಶಸ್ತಿ ಪ್ರಧಾನ ಸಮಾರಂಭ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಿಗ್ಗೆ 10 ಗಂಟೆಗೆ ನವನಗರದ ಅಗಸ್ತ್ಯ ಕೋರ್ ವಿಜ್ಞಾನ ಕೇಂದ್ರದಲ್ಲಿ ಜರಗುವ ಕಾರ್ಯಕ್ರಮವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಎಸ್.ಬಿರಾದಾರ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ.ಪೂಜಾರಿ ವಹಿಸಲಿದ್ದು, ಪ್ರಶಸ್ತಿ ಪ್ರಧಾನವನ್ನು ಶಿಕ್ಷಣಾಧಿಕಾರಿ ಎ.ಕೆ.ಬಸಣ್ಣವರ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ಬಿ.ಹಿರೇಮಠ, ಡಿವೈಪಿಸಿಯ ಜಾಸ್ಮೀನ್ ಕಿಲ್ಲೇದಾರ, ಸಿ.ಆರ್.ಓಣಿ, ವಿಷಯ ಪರಿವೀಕ್ಷಕ ಎಂ.ಎ.ಬಾಳಿಕಾಯಿ, ಎಸ್.ಎಸ್.ಹಾಲವರ ಸೇರಿದಂತೆ ರಾಜ್ಯ ವಿಜ್ಞಾನ ಪರಿಷತ್ತಿನ ಉಪಾದ್ಯಕ್ಷ ಬಿ.ದೊಡ್ಡಬಸಪ್ಪ ಭಾಗವಹಿಸಲಿದ್ದಾರೆ.

Be the first to comment

Leave a Reply

Your email address will not be published.


*