ಛತ್ರಪತಿ ಶಿವಾಜಿ ಜಯಂತಿ ಆಚರಣೆ

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಕೋವಿಡ್ ಹಿನ್ನಲೆಯಲ್ಲಿ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಶುಕ್ರವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಜಿ.ಪಂ ಅಧ್ಯಕ್ಷೆ ಬಾಯಕ್ಕೆ ಮೇಟಿ, ಶಾಸಕ ವೀರಣ್ಣ ಚರಂತಿಮಠ, ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅವರು ಶಿವಾಜಿ ಮಹಾರಾಜರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜಾಂದ್ರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಎನ್.ಹೇಮಾವತಿ, ಮಾಜಿ ವಿಧಾನ ಪರಿಷತ್ ಸದಸ್ಯ ನಾರಾಯಣಸಾ ಭಾಂಡಗೆ, ಸಮಾಜದ ಮುಖಂಡರಾದ ಡಾ.ಶೇಖರ ಮಾನೆ ಸೇರಿದಂತೆ ಇತರರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*