ಮುದ್ದೇಬಿಹಾಳ ಕ್ಷೇತ್ರದಲ್ಲಿ ದಿ.ದೇಶಮುಖ ಅವರಂತೆ ಅಭಿವೃದ್ಧಿ ಹರಿಕಾರರಾದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ…! ರೈತರೊಂದಿಗೊಂದು ದಿನ ಕಾರ್ಯಕ್ರಮದ ಮೂಲಕ ಕ್ಷೇತ್ರದ ರೈತರನ್ನು ಬೇಟಿಯಾಗಲಿರುವ ಕೃಷಿ ಸಚಿವ ಬಿ.ಸಿ.ಪಾಟೀಲ…!!!

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾಕದರು

ರಾಜ್ಯ ಸುದ್ದಿಗಳು

ಮುದ್ದೇಬಿಹಾಳ:

CHETAN KENDULI

ಮುದ್ದೇಬಿಹಾಳ ಮತಕ್ಷೇತ್ರದಲ್ಲಿ ಕಳೆದ 35 ವರ್ಷಗಳ ಹಿಂದೆ ನಾಲತವಾಡದ ದಿ.ದೇಶಮುಖ ಅವರ ನಂತರ ಕ್ಷೇತ್ರದಲ್ಲಿ ಆದಂತಹ ಅಭಿವೃದ್ಧ ಕಾರ್ಯಗಳನ್ನು ಇಂದಿನ ಶಾಸಕ ಹಾಗೂ ಕರ್ನಾಟಕ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಮರುಕಳಿಸುವಲ್ಲಿ ಸಂಪೂರ್ಣ ಯಶಸ್ವಿಯಾಗುತ್ತಿದ್ದಾರೆ.

ಈಗಾಗಲೇ ಮುದ್ದೇಬಿಹಾಳ ಹಾಗೂ ತಾಳಿಕೋಟಿ ತಾಲೂಕಿನ ಪ್ರತಿಯೊಂದು ಗ್ರಾಮದಲ್ಲಿಯೂ ಮೂಲಭೂತ ಸೌಕರ್ಯಗಳಾದ ರಸ್ತೆ, ಚರಂಡಿ, ಸಮುದಾಯ ಭವನ ಸೇರಿದಂತೆ ಇನ್ನಿತರ ಸೌಲಭ್ಯಗಳನ್ನು ಇಲ್ಲಿನ ಜನರಿಗೆ ಒದಗಿಸುವ ಕಾರ್ಯ ಮಾಡಿದ್ದು ಶಾಸಕ ನಡಹಳ್ಳಿ ಅವರು ಕ್ಷೇತ್ರದ ರೈತರಿಗೆ ಹೋಗುವ ಜಮೀನಿನ ರಸ್ತೆಗೆ ಹೆಚ್ಚಿನ ಮಹತ್ವ ನೀಡಿ ಪ್ರತಿಯೊಂದು ಗ್ರಾಮದಲ್ಲಿಯೂ ರೈತರಿಗೆ ಅನುಕೂಲವಾಗುವಂತೆ ಜಮೀನು ದಾರಿಗಳಿಗೆ ಢಾಂಬರಿಕರಣಗೊಳಿಸಿ ವಿನೂತನ ವಿನ್ಯಾಸ ನೀಡಿ ರೈತರಿಗೆ ಅನುಕೂಲ ಮಾಡಿಕೊಟ್ಟಿದ್ದಾರೆ.

ಮುದ್ದೇಬಿಹಾಳ ಕ್ಷೇತ್ರಕ್ಕೆ ರಾಜ್ಯ ನಾಯಕರುಗಳ ಬೇಟಿ:

ಮುದ್ದೇಬಿಹಾಳ ಕ್ಷೇತ್ರದಲ್ಲಿ ಪ್ರಪ್ರಥಮ ಬಾರಿಗೆ ಬಿಜೆಪಿ ಪಕ್ಷಕ್ಕೆ ಅಧಿಕಾರ ಗಿಟ್ಟಿಸಿಕೊಟ್ಟಿರುವ ಎ.ಎಸ್.ಪಾಟೀಲ ನಡಹಳ್ಳಿ ಅವರು ರಾಜ್ಯ ರಾಜಕಾರಣದಲ್ಲಿ ಯಾವುದೇ ಸಚಿವ ಸ್ಥಾನಕ್ಕೆ ಆಸೆ ಪಡೆದೇ ಕ್ಷೇತ್ರದ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ತಂದು ಕ್ಷೇತ್ರದ ಜನತೆಯ ಸೇವೆಯಲ್ಲಿ ನಿರತರಾಗಿದ್ದಾರೆ. ಕ್ಷೇತ್ರ ಮಾತ್ರವಲ್ಲದೇ ಜಿಲ್ಲೆಯಲ್ಲಿಯೇ ಇಷ್ಟೊಂದು ಅನುದಾನ ತಂದಿರುವ ಶಾಸಕರಲ್ಲಿ ಎ.ಎಸ್.ಪಾಟೀಲ ನಡಹಳ್ಳಿ ಅವರು ಮೊದಲನೇಯವರಾಗಿದ್ದಾರೆ. ಕ್ಷೇತ್ರದಲ್ಲಿ ಇವರ ಅಭಿವೃದ್ಧಿಯಿಂದ ರಾಜ್ಯ ಸರಕಾರದ ಉಪ ಮುಖ್ಯಮಂತ್ರಿಗಳು, ಸಚಿವರು ಕ್ಷೇತ್ರಕ್ಕೆ ಬೇಟಿ ನೀಡಿದ್ದಾರೆ.

ನಾಳೆ ಮುದ್ದೇಬಿಹಾಳ ಕ್ಷೇತ್ರದ ರೈತರೊಂದಿಗೊಂದು ದಿನ ಕಾರ್ಯಕ್ರಮದಲ್ಲಿ ಸಚಿವ ಬಿ.ಸಿ.ಪಾಟೀಲ:

ಮುದ್ದೇಬಿಹಾಳ ಕ್ಷೇತ್ರದ ರೈತರು ಹಲವಾರು ವರ್ಷಗಳಿಂದ ಸಾಕಷ್ಟು ತೊಂದರೆಗೊಳಗಾಗಿದ್ದು ಸದ್ಯದ ಪರಿಸ್ಥಿತಿಯನ್ನು ಸ್ಥಳೀಯ ಶಾಸಕ ನಡಹಳ್ಳಿ ಅವರು ಒಂದೊಂದಾಗಿ ಬಗೆಹರಿಸುತ್ತಿದ್ದಾರೆ. ಅಲ್ಲದೇ ಕ್ಷೇತ್ರದಲ್ಲಿ ಕೃಷಿ ಸಂಬಂಧಿಸಿದ ವಿಷಯಕ್ಕೆ ಹೆಚ್ಚಿನ ಆದ್ಯತೆ ನೀಡಿರುವ ಅವರು ಇಲ್ಲಿನ ರೈತರ ಬೇಡಿಕೆಗಳನ್ನು ಸರಕಾರದ ಮುಂದಿಟ್ಟು ಧ್ವನಿ ಎತ್ತುವ ಕಾರ್ಯ ಮಾಡಿದ್ದಾರೆ. ರಾಜ್ಯ ಕೃಷಿ ಸಚಿವರಾಗಿರುವ ಬಿ.ಸಿ.ಪಾಟೀಲ ಅವರನ್ನು ಕ್ಷೇತ್ರಕ್ಕೆ ಪ್ರವಾಸ ಕೈಗೊಳ್ಳುವಂತೆ ಮಾಡಿದ್ದು ಕ್ಷೇತ್ರದ ರೈತರೊಂದಿಗೆ ಕೃಷಿ ಸಚಿವರು ‘ರೈತರೊಂದಿಗೊಂದು ದಿನ’ ವಿಶೇಷ ಕಾರ್ಯಕ್ರಮವನ್ನೂ ತಾಲೂಕಿನ ಕವಡಿಮಟ್ಟಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದಾರೆ.

 

Be the first to comment

Leave a Reply

Your email address will not be published.


*