ರಾಜ್ಯ ಸುದ್ದಿಗಳು
ಅಂಬಿಗ್ ನ್ಯೂಸ್:
ರಾಜ್ಯ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಸಚಿವ ಸ್ಥಾನಕ್ಕೆ ಬುಧವಾರ ಸಿಎಂ ಯಡಿಯೂರಪ್ಪನವರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.
ರಮೇಶ್ ಜಾರಕಿಹೊಳಿ ಅವರದ್ದು ಎನ್ನಲಾದ ರಾಸಲೀಲೆ ಸಿಡಿ ಮಾಧ್ಯಮಗಳಲ್ಲಿ ಭಿತ್ತರಗೊಂಡ ಮರುದಿನವೇ ಅವರು ಸಿಎಂಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ಪಕ್ಷಕ್ಕೆ ಮುಜುಗರ ತಪ್ಪಿಸುವ ದೃಷ್ಟಿಯಿಂದ ರಾಜೀನಾಮೆ ಪಡೆಯಲಿದೆ ಎನ್ನಲಾಗುತ್ತಿದೆ. ಇನ್ನು ಸಿಡಿ ಪ್ರಕರಣದ ಕುರಿತು ತನಿಖೆ ನಂತರ ಸತ್ಯಾಸತ್ಯತೆ ಬಯಲಾಗಲಿದೆ ಎಂದು ಹೇಳಲಾಗುತ್ತಿದೆ.
ನಾಳೆಯಿಂದ ಬಜೆಟ್ ಅಧಿವೇಶನ ಆರಂಭವಾಗುತ್ತಿದೆ. ಆಡಳಿತ ಪಕ್ಷವನ್ನು ಬಗ್ಗುಬಡಿಯಲು ವಿರೋಧ ಪಕ್ಷವದವರಿಗೆ ಈಗ ಸಿಡಿ ಅಸ್ತ್ರ ಸಿಕ್ಕಿದೆ. ಇದು ಅಧಿವೇಶನದ ಮೇಲೆ ನೇರ ಪರಿಣಾಮ ಬೀರುವುದರಿಂದ ಇದರಿಂದ ತಪ್ಪಿಸಿಕೊಳ್ಳಲು ರಾಜೀನಾಮೆ ಪಡೆದುಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.
ನಾಗರಿಕ ಹಕ್ಕು ಹೋರಾಟ ಹಕ್ಕು ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಅವರು ರಮೇಶ್ ಜಾರಕಿಹೊಳಿ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ತನಿಖೆ ನಡೆಯಲಿದ್ದು ನಂತರ ಇದರಲ್ಲಿ ಯಾರ ಕೈವಾಡವಿದೆ, ಹಿಂದಿರುವ ಕೈ ಯಾವುದು ಎಲ್ಲವೂ ನಂತರ ತಿಳಿಯಲಿದೆ.
ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ದಿನೇಶ್ ಕಲ್ಲಹಳ್ಳಿ, ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಪ್ರಕರಣದ ಬಗ್ಗೆ ಪಾರದರ್ಶಕವಾಗಿ ತನಿಖೆ ಆಗಬೇಕು ಎಂದು ಹೇಳಿದ್ದಾರೆ.
Be the first to comment