ರಾಜ್ಯ ಸುದ್ದಿಗಳು
ಮುದ್ದೇಬಿಹಾಳ:
ರಾಜ್ಯ ಬಜೆಟ್ ಮಂಡನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪನವರು ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮಕ್ಕೆ 500 ಕೋಟಿ ರೂಪಾಯಿ ಮೀಸಲಿಟ್ಟು ಸಮಾಜದ ಏಳಿಗೆಗೆ ಮಹತ್ವ ನೀಡಿದ್ದು ಮುದ್ದೇಬಿಹಾಳ ತಾಲೂಕಾ ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಶರಣು ಬೂದಿಹಾಳಮಠ ಅಭಿನಂದನೆ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ವೀರಶೈವ ಲಿಂಗಾಯತ ಸಮಾಜದ ಏಳಿಗೆಗಾಗಿ ಹಲವು ವರ್ಷಗಳ ಹಿಂದೆಯೇ ನಿಗಮವನ್ನು ಸ್ಥಾಪಿಸಲಾಗಿತ್ತು. ಸ್ಥಾಪನೆಯಾದ ದಿನದಿಂದಲೂ ನಿಗಮಕ್ಕೆ ಇಂದಿನ ಸರಕಾರ ನೀಡಿದಷ್ಟು ಹಣ ನೀಡಿದ್ದಿಲ್ಲ. ಆದರೆ ಯಡಿಯೂರಪ್ಪನವರು ಮುಖ್ಯಮಂತ್ರಿಗಳಾಗಿ 8ನೇ ಬಜೇಟ್ ಮಂಡನೆಯಲ್ಲಿ 500 ಕೋಟಿ ರೂಪಾಯಿ ಮೀಸಲಿಟ್ಟಿದ್ದು ಸಂತಸದ ಸಂಗತಿಯಾಗಿದೆ. ಇದರಿಂದ ಹಿಂದುಳಿದಿರುವ ಸಮಾಜದವರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ಹೇಳಿದರು.
Be the first to comment