ರಾಜ್ಯದಲ್ಲಿ ಕೈಗಾರಿಕಾ ಬಂಡವಾಳ ಹೂಡಿಕೆದಾರರ ಬೃಹತ್ ಸಮಾವೇಶ: ಸಚಿವ ಜಗದೀಶ ಶೆಟ್ಟರ

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ರಾಜ್ಯ ಸುದ್ದಿಗಳು

ವಿಜಯಪುರ:

CHETAN KENDULI

ರಾಜ್ಯವು ಕೊರೋನಾದಿಂದ ತತ್ತರಿಸಿದೆ. ಆದರೂ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗಾಗಿ ಬಂಡವಾಳ ಹುಡಿಕೇದಾರರ ಬೃಹತ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕೈಗಾರಿಕಾ ಸಚಿವ ಜಗದೀಶ ಶೆಟ್ಟರ ತಿಳಿಸಿದರು.
ಶುಕ್ರವಾರ ವಿಜಯಪುರ ನಗರಕ್ಕೆ ಆಗಮಿಸಿ ಮಾತನಾಡಿದ ಅವರು, ವಿಜಯಪುರ- ಬಾಗಲಕೋಟೆ, ಕಲಬುರಗಿ- ಬೀದರ್ ಹಾಗೂ ಮೈಸೂರು ಈ ಮೂರು ಕಡೆಗೆ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗುವುದು ಎಂದರು.
ವಿಜಯಪುರ ಜಿಲ್ಲೆಯ ಮುಳವಾಡ ಹತ್ತಿರದಲ್ಲಿ 3000 ಎಕರೆ ಪ್ರದೇಶವನ್ನು ಕೈಗಾರಿಕೆ ವಲಯಕ್ಕೆ ಅಭಿವೃದ್ಧಿ ಪಡಿಸಲಾಗಿದ್ದು, ಕೆಲವೇ ತಿಂಗಳಲ್ಲಿ ಮೊದಲ ಹಂತದ ಪ್ರದೇಶವನ್ನು ಉದ್ಯಮಿಗಳಿಗೆ ಹಂಚಿಕೆ ಮಾಡಲಾಗುವುದು. ಅಲ್ಲದೇ, ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಅವಕಾಶ ನೀಡಲು ನೂತನ ಕೈಗಾರಿಕೆ ನೀತಿಯಲ್ಲಿ ಅವಕಾಶ ಕಲ್ಪಿಸಲಾಗುವುದು ಎಂದರು.


 ಸಚಿವರನ್ನು ಭರಮಾಡಿಕೊಂಡ ರಾಜ್ಯ ಆಹಾರ ಮತ್ತು ನಾಗರೀಕ ಸರಬರಾಜು ನಿಗಮ ಅಧ್ಯಕ್ಷ ಹಾಗೂ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಅವರು ಮುದ್ದೇಬಿಹಾಳ ಕ್ಷೇತ್ರದಲ್ಲಿ ಸಾಕಷ್ಟು ಭೂಮಿಯ ಅನುಕೂಲವಿದ್ದು ಕ್ಷೇತ್ರದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿರುದ್ಧಿ ಪಡಿಸುವ ಬೇಡಿಕೆ ಇಟ್ಟರು.

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಶಾಸಕ ಶಿವಾನಂದ ಪಾಟೀಲ, ನಿರ್ದೇಶಕ ಸೋಮನಗೌಡ ಪಾಟೀಲ, ಪ್ರಥಮ ಧರ್ಜೆ ಗುತ್ತಿಗೆದರ ಅಪ್ಪು ಮೈಲೇಶ್ವರ ಇದ್ದರು.

Be the first to comment

Leave a Reply

Your email address will not be published.


*