ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ:ನಾಳೆಯಿಂದ 2 ವಾರ ಕಠಿಣ ನಿಯಮಗಳು ಜಾರಿ.

ಬೆಂಗಳೂರು: ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದರೂ ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಸೋಮವಾರ ಸ್ಪಷ್ಟಪಡಿಸಿದ್ದಾರೆ.

ಕೊರೋನಾ ರೂಪಾಂತರಿ ಹೆಚ್ಚಳ ಹಿನ್ನಲೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಇಂದು ಸಂಜೆ ಗೃಹ ಕಚೇರಿ ಕೃಷ್ಣಾದಲ್ಲಿ ಗೃಹ, ಆರೋಗ್ಯ, ಶಿಕ್ಷಣ ಸಚಿವರು ಹಾಗೂ ಇಲಾಖಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದರು.

ಸಭೆಯ ನಂತರ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಇಲ್ಲ. ನೈಟ್ ಕರ್ಫ್ಯೂ ಸಹ ಜಾರಿಗೊಳಿಸುವುದಿಲ್ಲ. ಆದರೆ ನಾಳೆಯಿಂದ ಕೊರೊನಾ ತಡೆಗೆ ಮುಂದಿನ 2 ವಾರ ಕಠಿಣ ರೂಲ್ಸ ಜಾರಿಗೆ ತರಲಾಗುತ್ತಿದೆ.

ಪ್ರತಿಭಟನೆ, ಜಾತ್ರಾ, ಮಹೋತ್ಸವ, ಧಾರ್ಮಿಕ ಕಾರ್ಯಕ್ರಮಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಈಜುಕೊಳ,
ಜಿಮ್ ಸಂಪೂರ್ಣ ಬಂದ ಮಾಡಲಾಗಿದೆ. ಅಪಾಟ್೯ಮೆಂಟಗಳಲ್ಲಿ ವಿವಿಧ ಚಟುವಟಿಕೆಗಳಿಗೆ ನಿಷೇಧ, ಕ್ಲಬ್ ಗಳಲ್ಲಿ ಹಲವು ಚಟುವಟಿಕೆಗಳಿಗೆ ನಿರ್ಬಂಧ ಹೇರಲಾಗಿದೆ.

ಶಾಲಾ ಕಾಲೇಜುಗಳ ಬಗ್ಗೆ ಯಾವುದೇ ನಿರ್ಧಾರ ತೆಗೆದುಕೊಂಡಿರುವುದಿಲ್ಲ.ಅದಲ್ಲದೆ 1 ರಿಂದ 9 ನೇ ತರಗತಿಯ ಮಕ್ಕಳನ್ನು ಎಕ್ಸಾಂ ಇಲ್ಲದೆ ಪಾಸ್ ಮಾಡುವ ನಿರ್ಧಾರ ಕೈಬಿಟ್ಟಿರುತ್ತದೆ.
ಥಿಯೇಟರ್ ಹೌಸಪುಲ್ ಗೆ ಯಾವುದೆ ನಿರ್ಬಂಧ ಹೇರದೆ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

ಲಾಕ್ ಡೌನ್ ಬದಲಿಗೆ ರಾಜ್ಯದಲ್ಲಿ ಕೋವಿಡ್ ನಿರ್ಬಂಧಿಸಲು ಒಂದಷ್ಟು ಕಠಿಣ ನಿಯಮಗಳು ಜಾರಿಗೆ ತರಲಾಗುತ್ತಿದೆ.ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಲಾಗುವುದು ಎಂದರು.

Be the first to comment

Leave a Reply

Your email address will not be published.


*