ಬಾಗಲಕೋಟೆ: ಕೋವಿಡ್ -19 ಸಾಂಕ್ರಾಮಿಕ ರೋಗವು ಜಿಲ್ಲೆಯಲ್ಲಿ ದಿನೆ ದಿನೆ ಹೆಚ್ಚಾಗುತ್ತಿರುವುದರಿಂದ ಕೋವಿಡ್ ಪಾಸಿಟಿವ್ ಕಂಡುಬಂದಂತಹ ಸಂಪರ್ಕಿತ ರನ್ನು ಗುರುತಿಸಿ ಪರೀಕ್ಷೆಗೆ ಒಳಪಡಿಸುವುದು ಹಾಗೂ ಅವರನ್ನು ಪ್ರತ್ಯೇಕವಾಗಿರಿಸಿ ರೋಗ ಹರಡದಂತೆ ಕ್ರಮವಹಿಸುವುದು ಅವಶ್ಯಕವಾಗಿರುತ್ತದೆ.
ಈ ಹಿನ್ನೆಲೆಯಲ್ಲಿ ಮಾನ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮೇಲುಸ್ತುವಾರಿಯಲ್ಲಿ ಜಿಲ್ಲೆಯ ಎಲ್ಲಾ ತಹಶೀಲ್ದಾರರು, ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲೂಕ ಆರೋಗ್ಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಂಪರ್ಕಿತರನ್ನು ಗುರುತಿಸುವ ಕಾರ್ಯದಲ್ಲಿ ತೊಡಗಿಕೊಂಡು ಮಾನ್ಯರಿಗೆ ಸಹಕರಿಸುವಂತೆ ಹಾಗೂ ನೀಡಿದ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸಿ ಸಂಪರ್ಕಿತರನ್ನು ಗುರುತಿಸುವಲ್ಲಿ ಹಾಗೂ ಪರೀಕ್ಷೆಗೆ ಒಳಪಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ತಿಳಿಸಿದೆ.
ಒಂದು ವೇಳೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ ನಿರ್ದೇಶನವನ್ನು ಪಾಲಿಸದೇ ಇದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005ರ ಸೆಕ್ಷನ್ 51-60 ರ ಪ್ರಕಾರ ಕಟ್ಟುನಿಟ್ಟಿನ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಬಾಗಲಕೋಟೆಯ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment