ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳು ಹಾಗೂ ಐತಿಹಾಸಿಕ ಸ್ಮಾರಕಗಳಿಗೆ ಪ್ರವೇಶ ತಾತ್ಕಾಲಿಕವಾಗಿ ಬಂದ್.

ವರದಿ: ಶರಣಪ್ಪ ಬಾಗಲಕೋಟೆ

ಬಾಗಲಕೋಟೆ:ಕೊವಿಡ್‍-19 ಸಾಂಕ್ರಾಮಿಕ ಸೋಂಕು ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಪ್ರಮುಖ ದೇವಸ್ಥಾನಗಳಿಗೆ ಭಕ್ತರ ಪ್ರವೇಶ ಹಾಗೂ ಐತಿಹಾಸಿಕ ಸ್ಮಾರಕಗಳಿಗೆ ಪ್ರವಾಸಿಗರ ಪ್ರವೇಶವನ್ನು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಾತ್ಕಾಲಿಕವಾಗಿ ನಿಷೇಧಿಸಿದೆ.

ಕೋವಿಡ್-19 ಸಾಂಕ್ರಾಮಿಕ ರೋಗ ವ್ಯಾಪಕವಾಗಿ ತೀವ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಾಗೂ ದಿನಾಂಕ 17-04 -2021ರಂದು ಗೃಹ ಸಚಿವರು, ಕಂದಾಯ ಸಚಿವರು ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ನಿಯಂತ್ರಣ ಕೋವಿಡ್-19 ನಿಯಂತ್ರಣ ಕುರಿತು ಜರುಗಿದ ವಿಡಿಯೋ ಸಂವಾದ ಸಭೆಯಲ್ಲಿ ನೀಡಿದ ನಿರ್ದೇಶನದಂತೆ ಸಾರ್ವಜನಿಕರ ಹಿತದೃಷ್ಟಿಯಿಂದ ಕೋವಿಡ್-19 ರೋಗವನ್ನು ನಿಯಂತ್ರಿಸಲು ಜಿಲ್ಲೆಯ ಪ್ರಮುಖ ಧಾರ್ಮಿಕ ಕ್ಷೇತ್ರಗಳಾದ ಬಾದಾಮಿ ಬನಶಂಕರಿ ದೇವಸ್ಥಾನ, ಬಾಗಲಕೋಟೆ ತಾಲೂಕಿನ ತುಳಸಿಗೇರಿ ಹನುಮಂತ ದೇವರ ದೇವಸ್ಥಾನ, ಹಾಗೂ ಮುಚಕಂಡಿ ವೀರಭದ್ರೇಶ್ವರ ದೇವಸ್ಥಾನ, ಹುನಗುಂದ ತಾಲೂಕಿನ ಕೂಡಲಸಂಗಮ ಕ್ಷೇತ್ರಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಪತ್ತು ನಿರ್ವಹಣಾ ಕಾಯ್ದೆ- 2005 ಮತ್ತು ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ- 1897 ರ ಕಾಯ್ದೆಯನ್ವಯ ತಾತ್ಕಾಲಿಕವಾಗಿ ಬಂದ್ ಮಾಡಿ ಆದೇಶಿಸಿದೆ. ಹಾಗೂ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳನ್ನು ಪ್ರವಾಸಿಗರ ಹಿತದೃಷ್ಟಿಯಿಂದ ಮೇ -15 -2021 ರವರೆಗೆ ಬಂದ್ ಮಾಡಲು ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾಧಿಕಾರಿಗಳು ಬಾಗಲಕೋಟೆ ಇವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

Be the first to comment

Leave a Reply

Your email address will not be published.


*