ಜಿಲ್ಲಾ ಸುದ್ದಿಗಳು
ಬಾಗಲಕೋಟೆ:
ಜಿಲ್ಲೆಯ ಇಳಕಲ್ಲ ತಾಲೂಕಿನ ಗುಡೂರ ಗ್ರಾಮದಲ್ಲಿ ವಿಕ್ ಎಂಡ್ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತಿದೆ. ಕೊರೋನಾ ಸೋಂಕು ನಿಯಂತ್ರಿಸುವ ಸಂಬಂಧ ಹೊಸದಾಗಿ ಜಾರಿಗೊಳಿಸಿರುವ ಮಾರ್ಗಸೂಚಿಯ ಅನುಸಾರ ವಾರಾಂತ್ಯದ ಕರ್ಫ್ಯೂ ಸೇರಿದಂತೆ ಅನುಮತಿ ನೀಡಿರುವ ವಾಣಿಜ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಇನ್ನುಳಿದ ಎಲ್ಲ ವ್ಯಾಪಾರ ಹಾಗೂ ವಹಿವಾಟುಗಳ ನಿರ್ಬಂಧವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಗುಡೂರ ಪೊಲೀಸ್ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.
ಮಾರ್ಗಸೂಚಿ ಉಲ್ಲಂಘಿಸಿ ಅನಗತ್ಯವಾಗಿ ರಸ್ತೆಗಿಳಿಯುವ ಜನರ ವಿರುದ್ಧ ಮುಲಾಜಿಲ್ಲದೆ ‘ದಂಡ’ ಪ್ರಯೋಗಿಸಲಾಗುತ್ತದೆ. ಕೋವಿಡ್-19ರ ನಿಯಮಗಳನ್ನು ಉಲ್ಲಂಘಿಸಿದರೆ ಐಪಿಸಿ 188, ವಿಪತ್ತು ನಿರ್ವಹಣಾ ಕಾಯ್ದೆಯಡಿ ಕೇಸ್ ದಾಖಲಿಸಲಾಗುತ್ತದೆ ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಕೊರೋನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರದ ಆದೇಶದಂತೆ ವಾರಾಂತ್ಯದ ಕರ್ಫ್ಯೂ ಅನುಷ್ಠಾನಗೊಳಿಸಿದ್ದು ಅಗತ್ಯ ವಸ್ತುಗಳ ಸರಬರಾಜು ಹಾಗೂ ವೈದ್ಯಕೀಯ ಸೇವೆಗಳ ವಾಹನಗಳ ಸಂಚಾರ ಎಂದಿನಂತೆ ಮುಂದುವರೆಯಲಿದೆ. ಶುಕ್ರವಾರ ರಾತ್ರಿಯಿಂದಲೇ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಈ ವೇಳೆ ಸರ್ಕಾರ ಅನುಮತಿ ನೀಡಿರುವ ವಾಣಿಜ್ಯ ಚಟುವಟಿಕೆಗಳ ಹೊರತುಪಡಿಸಿ ಇನ್ನುಳಿದ ಎಲ್ಲ ವ್ಯಾಪಾರ ಹಾಗೂ ವಹಿವಾಟುಗಳು ಸಂಪೂರ್ಣ ಸ್ಥಗಿತವಾಗಿದ್ದು, ನಿಯಮ ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ ಜರುಗಿಸಲಾಗುತ್ತದೆ.
ಪೊಲೀಸ್ ಇಲಾಖೆ, ಕಂದಾಯ ಇಲಾಖೆ ನೇತೃತ್ವ ವಹಿಸಿದ್ದರು.
Be the first to comment