ನಾಳೆ ರಾತ್ರಿ 9 ರಿಂದ ರಾಜ್ಯಾದ್ಯಂತ ‘ಜನತಾ ಲಾಕ್ ಡೌನ್ ಜಾರಿ’.ಯಾರು ಮನೆಯಿಂದ ಹೊರ ಬರುವಂತಿಲ್ಲ.

ವರದಿ:ಅಂಬಿಗ ನ್ಯೂಸ್

ರಾಜ್ಯ ಸುದ್ದಿಗಳು

ಬೆಂಗಳೂರು:

CHETAN KENDULI

ನಾಳೆ ರಾತ್ರಿ 9 ರಿಂದ ಮೇ-10 ರವರೆಗೆ ರಾಜ್ಯಾಧ್ಯಂತ ಬಿಗಿ ಕ್ರಮ ಕೈಗೊಳ್ಳಲಾಗುತ್ತಿದೆ. 14 ದಿನಗಳವರೆಗೆ ಕರ್ನಾಟಕದಲ್ಲಿ ಸಂಪೂರ್ಣ ಜನತಾ ಲಾಕ್ ಡೌನ್ ಜಾರಿ ಮಾಡಲಾಗುತ್ತಿದೆ. ಬೆಳಿಗ್ಗೆ 6 ರಿಂದ 10 ಗಂಟೆಯವರೆಗೆ ಮಾತ್ರವೇ ಅಗತ್ಯ ವಸ್ತುಗಳನ್ನು ಖರೀದಿಸಲು ಅವಕಾಶ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಘೋಷಸಿದ್ದಾರೆ.

ಗಾರ್ಮೆಂಟ್ಸ್ ನೌಕರರನ್ನು ಬಿಟ್ಟು, ಕಟ್ಟಡ ಕಾಮಗಾರಿ, ಕೃಷಿ ಚಟುವಟಿಕೆಗೆ ಯಾವುದೇ ತೊಂದರೆಯಿಲ್ಲ. ವೈದ್ಯಕೀಯ, ಅಗತ್ಯ ಸೇವೆ ಎಂದಿನಂತೆ ಇರಲಿದೆ. ರಾತ್ರಿ 9 ಗಂಟೆಯಿಂದ ಬೆಳಿಗ್ಗೆ 6ರವೆರೆಗ ಕರ್ಪ್ಯೂ ಮುಂದುವರೆಯಲಿದೆ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಸೂಕ್ತ ಬಂದೋಬಸ್ತ್ ಮಾಡಲಿದ್ದಾರೆ. ತಾಲೂಕು ಮಟ್ಟದಲ್ಲಿ ತಹಶಿಲ್ದಾರರು ಆಡಳಿತ ನಿಯಂತ್ರಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಬೆಳಿಗ್ಗೆ 6 ರಿಂದ 10ರವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10 ಗಂಟೆಯ ನಂತ್ರ ಎಲ್ಲವೂ ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದೆ ಎಂದರು. KSRTC,BMTC ಬಸ್ ಸಂಚಾರ ಇರಲ್ಲ. ನಾಳೆ ರಾತ್ರಿ 9 ರಿಂದ ಮೇ -10 ರವರೆಗೆ 14 ದಿನ ಯಾರು ಹೊರಗಡೆ ಬರುವಂತಿಲ್ಲ ಮನೆಯಲ್ಲೆ ಇರಬೇಕು.

Be the first to comment

Leave a Reply

Your email address will not be published.


*