ನಿಯಮ ಉಲ್ಲಂಘಿಸಿ ಮದುವೆ : 13 ಪ್ರಕರಣ ದಾಖಲು.

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :

ಜಿಲ್ಲೆಯ ಬಾಗಲಕೋಟೆ ಉಪ ವಿಭಾಗ ವ್ಯಾಪ್ತಿಯಲ್ಲಿ ಮದುವೆ ಕಾರ್ಯದಲ್ಲಿ ಸರಕಾರ ಹೊರಡಿಸಿದ ಮಾರ್ಗಸೂಚಿ ಉಲ್ಲಂಘನೆದಡಿ ಒಟ್ಟು 13 ಪ್ರಕರಣಗಳನ್ನು ದಾಖಲಿಸಿರುವುದಾಗಿ ಬಾಗಲಕೋಟೆ ಉಪವಿಭಾಗಾಧಿಕಾರಿ ಎಂ.ಗಂಗಪ್ಪ ತಿಳಿಸಿದ್ದಾರೆ.

ಸರಕಾರ ಕೊರೊನಾ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಮದುವೆ‌ ಕಾರ್ಯಕ್ರಮಕ್ಕೆ 50 ಜನಕ್ಕೆ ಅವಕಾಶ ಕಲ್ಪಿಸಿದೆ. ಅಲ್ಲದೇ ಸ್ಥಳೀಯ ಪೊಲೀಸ್ ಠಾಣೆ, ನಗರ ಮತ್ತು ಗ್ರಾಮೀಣ ಮಟ್ಟದ ಅಧಿಕಾರಿಗಳಿಂದ ಎನ್.ಓ.ಸಿ ಹಾಗೂ ಉಪವಿಬಾಗಾಧಿಕಾರಿಗಳಿಂದ ಷರತ್ತಿಗೆ ಒಳಪಟ್ಟು ಅನುಮತಿ ಪತ್ರ ಹಾಗೂ 50 ಪಾಸ್ ಗಳನ್ನು ನೀಡಲಾಗಿತ್ತು. ಆದರೂ ಸಹ ಮದುವೆ ಆಯೋಜಕರು ನಿಯಮ ಉಲ್ಲಂಘನೆಯಾದ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯ ಬಾಗಲಕೋಟೆ, ಬಾದಾಮಿ, ಗುಳೇದಗುಡ್ಡ, ಹುನಗುಂದ ಹಾಗೂ ಇಲಕಲ್ಲ ತಾಲೂಕಿನ ನಗರ ಮತ್ತು ಗ್ರಾಮೀಣ ಭಾಗದಲ್ಲಿ ಎಪ್ರೀಲ್ 26 ಮತ್ತು 27 ರಂದು ನಡೆದ ಮದುವೆಗಳಲ್ಲಿ ನಿಮಯ ಉಲ್ಲಂಘಿಸಿದ 13 ಮದುವೆ ಆಯೋಜಕರ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.

ಬಾದಾಮಿ ತಾಲೂಕಿನ ಹೂಲಗೇರಿ ಗ್ರಾಮದಲ್ಲಿ ಗ್ರಾ.ಪಂ ದಿಂದ ಎನ್.ಓ.ಸಿ ಪಡೆದು ಉಪ ವಿಭಾಗಾಧಿಕಾರಿಗಳಿಂದ ಅನುಮತಿ ಪತ್ರ ಹಾಗೂ ಪಾಸ್ ಪಡೆಯದೇ 50 ಕ್ಕಿಂತ ಹೆಚ್ಚಿನ ಜನ ಸೇರಿರುವುದು, ಜಮ್ಮನಕಟ್ಟಿ ಗ್ರಾಮದಲ್ಲಿ ನಿಮಯ ಮೀರಿ ಹೆಚ್ಚಿನ ಜನ ಸೇರಿರುವುದು ಸೇರಿದಂತೆ ಅನುಮತಿ ಪತ್ರದಲ್ಲಿ ತಿಳಿಸಿರುವ ಷರತ್ತುಗಳನ್ನು ಉಲ್ಲಂಘನೆಯಡಿ ಎಫ್.ಐ.ಆರ್ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಮದುವೆ ಆಯೋಜಕರು ಅನುಮತಿ ಪತ್ರದಲ್ಲಿ ತಿಳಿಸಿರುವ ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮದುವೆ ಕಾರ್ಯದಲ್ಲಿ ಕೆಲಸ‌ ಮಾಡುವವರು ಸೇರಿದಂತೆ 50 ಕ್ಕೂ ಹೆಚ್ಚು ಜನ ಸೇರುವಂತಿಲ್ಲ. ನಿಯಮ ಉಲ್ಲಂಘಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ಪ್ರಕರಣ ದಾಖಲಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಸರಕಾರದ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಕೊರೊನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಸಹಕರಿಸುವಂತೆ ಉಪವಿಭಾಗಾಧಿಕಾರಿಗಳು ಕೋರಿದ್ದಾರೆ.

Be the first to comment

Leave a Reply

Your email address will not be published.


*