30 ಗುಣಮುಖ, 333 ಹೊಸ ಕೊರೊನಾ ಪ್ರಕರಣ ದೃಡ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:

ಜಿಲ್ಲೆಯಲ್ಲಿ 30 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 333 ಕೊರೊನಾ ಪ್ರಕರಣಗಳು ಹಾಗೂ 2 ಮೃತ ಪ್ರಕರಣಗಳು ಬುಧವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 16749 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 14732 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 162 ಬಾದಾಮಿ 11, ಜಮಖಂಡಿ 25, ಹುನಗುಂದ 25, ಮುಧೋಳ 97, ಬೀಳಗಿ 13 ಜನರಲ್ಲಿ ಸೋಂಕು ದೃಡಪಟ್ಟಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 10668 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 546507 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 518490 ನೆಗಟಿವ್ ಪ್ರಕರಣ 145 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 1872 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*