ಜಿಲ್ಲಾ ಸುದ್ದಿಗಳು
ಬಾಗಲಕೋಟೆ :
ಕೋವಿಡ್-19 ಎರಡನೇ ಅಲೆಯಿಂದ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರಲ್ಲಿ ಸುರಕ್ಷಿತ ಕ್ರಮಗಳ ಬಗ್ಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಜಾಗೃತಿ ವಾಹನಕ್ಕೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕಲ್ಪನಾ ಕುಲಕರ್ಣಿ ಚಾಲನೆ ನೀಡಿದರು.
ನವನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಆರೋಗ್ಯ ಇಲಾಖೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಪೊಲೀಸ್ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ಕೋವಿಡ್-19 ಜಾಗೃತಿ ವಾಹನಕ್ಕೆ ಚಾಲನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಮಾತನಾಡಿ ಕಾನೂನು ಸೇವೆಗಳ ಪ್ರಾಧಿಕಾರದ ರಾಜ್ಯ ಮಟ್ಟದ ಉಸ್ತುವಾರಿ ಸಮಿತಿ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಾಗಲಕೋಟೆ ಕೋವಿಡ್-19 ಸಾಂಕ್ರಾಮಿಕ ರೋಗ ಹರಡುವಿಕೆಯ ಹಿನ್ನಲೆಯಲ್ಲಿ ಅದನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಯಾವೆಲ್ಲ ಮುನ್ನೆಚ್ಚರಿಕೆಯ ಕ್ರಮಗಳನ್ನು ಪಾಲಿಸಬೇಕು ಎನ್ನುವುದರ ಕುರಿತಾಗಿ ಜನ ಜಾಗೃತಿಯನ್ನು ವಾಹನದ ಮೂಲಕ ಪ್ರಚಾರ ಮಾಡಲಾಗುತ್ತಿದೆ ಎಂದರು.
ಕಡ್ಡಾಯವಾಗಿ ಮಾಸ್ಕ ಧರಿಸುವುದು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವುದು, ಕೈಗಳನ್ನು ಸೋಪು ಅಥವಾ ಸ್ಯಾನಿಟೈಜರ್ ಮೂಲಕ ಶುಚಿಗೊಳಿಸಿಕೊಳ್ಳುವುದನ್ನು ತಿಳಿಸಲಾಗುತ್ತಿದೆ. ಕೋವಿಡ್‍ಗೆ ಸಂಬಂಧಿಸಿದ ದೂರುಗಳು ಇದ್ದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದೂಸಂ.08354-235876, ಮತ್ತು ಬಸವರಾಜ ಬಾದಾವಾಡಗಿ ಮೊನಂ.9164776477, ಇಮೇಲ್ ಐಡಿ ಗೆ ಸಲ್ಲಿಸಬಹುದಾಗಿದೆ ಎಂದರು.
ನ್ಯಾಯಾಲಯಗಳಲ್ಲಿ ತುರ್ತು ಸಂದರ್ಭಗಳಲ್ಲಿ ಮುಖ್ಯವಾದ ಕೇಸುಗಳಲ್ಲಿ ಮಾತ್ರ ಕಾನೂನಿನ ಕಾರ್ಯ ಕಲಾಪಗಳನ್ನು ಕೈಗೊಳ್ಳಲಾಗುತ್ತಿದೆ. ವಿಡಿಯೋ ಕಾನ್ಫೆರೆನ್ಸ್ ಮೂಲಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಲಾಗುತ್ತಿದೆ ಎಂದರು. ಜಿಲ್ಲಾ ನ್ಯಾಯಾಲಯದ ಆಡಳಿತಾಧಿಕಾರಿ ಎಂ.ಎಚ್.ಕಡಕೋಳ, ನಗರಸಭೆಯ ಪೌರಾಯುಕ್ತ ಮುನಿಷಾಮಪ್ಪ, ಪ್ಯಾನೆಲ್ ವಕೀಲರಾದ ಪಿ.ಎಚ್.ಮಾಳೆದ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment