ತುಂಬಿ ಹರಿಯುತ್ತಿರು ಕೃಷ್ಣಾ ನದಿ. ನದಿ ದಡದ ಹಳ್ಳಿಗಳಿಗೆ ಹೈ ಅಲರ್ಟ್.

­


            ಜೀಲ್ಲಾ ಸುದ್ದಿಗಳು


­ಲಿಂಗಸಗೂರ: ಲಿಂಗಸೂಗೂರು ತಾಲ್ಲೂಕಿನ ಕೃಷ್ಣಾ ನದಿ ತುಂಬಿ ಹರಿಯುತ್ತಿದ್ದು, ನದಿ ಪಾತ್ರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ನಾರಾಯಣಪುರ ಜಲಾಶಯ ಸಂಪೂರ್ಣ ಭರ್ತಿಯಾಗಿದೆ.

ಇದರಿಂದ ೨೦ ಗೇಟ್ ಗಳ ಮೂಲಕ ಕೃಷ್ಣಾ ನದಿಗೆ ೧ ಲಕ್ಷ ೬೩ ಸಾವಿರ ಕ್ಯೂಸೆಕ್ಸ್ ನೀರು ಬಿಡಲಾಗಿದೆ.

ಜಿಲ್ಲೆಯ ಲಿಂಗಸುಗೂರು ತಾಲ್ಲೂಕಿನ ಶೀಲಹಳ್ಳಿ ಬ್ರೀಡ್ಜ್ ಹಾಗು ದೇವದುರ್ಗ ತಾಲ್ಲೂಕಿನ ಹೂವಿನಹೆಡಗಿ ಬ್ರೀಡ್ಜ್ ಮುಳುಗಲು ಕೇವಲ ಮೂರು ಅಡಿ ಮಾತ್ರ ಬಾಕಿ ಇದ್ದು, ಮುಂಜಾಗ್ರತ ಕ್ರಮವಾಗಿ ಪೊಲೀಸರ ನಿಯೋಜನೆ ಮಾಡಲಾಗಿದೆ. ಹೂವಿನಹೆಡಗಿ ಸೇತುವೆ ಮುಳುಗಡೆ ಆದ್ರೆ ದೇವದುರ್ಗ- ಕಲಬುರ್ಗಿ ಮಾರ್ಗ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳಲಿದೆ.

­

ಕೃಷ್ಣಾ ನದಿ ತುಂಬಿ ಹರಿಯುತ್ತಿರುವ ಹಿನ್ನೆಲೆ ಜಾನುವಾರುಗಳನ್ನು ನದಿಗೆ ಬಿಡದಂತೆ ನದಿ ಪಾತ್ರದ ಗ್ರಾಮಸ್ಥರಿಗೆ ಎಚ್ಚರಿಕೆ ನೀಡಲಾಗಿದೆ‌. ನದಿ ತುಂಬಿ ಹರಿಯುತ್ತಿರುವುದರಿಂದ ನದಿ ಪಾತ್ರದ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ಇನ್ನು ಸಮರ್ಪಕವಾಗಿ ಫ್ಲಡ್ ಎದುರಿಸಲು ಜಿಲ್ಲಾಡಳಿತ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ‌. ಅಲ್ಲದೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.

ವರದಿ::ಅಮರೇಶ ಲಿಂಗಸುಗುರ

Be the first to comment

Leave a Reply

Your email address will not be published.


*