ಮಸ್ಕಿ ಕಾಂಗ್ರೆಸ್ ಭದ್ರ ಕೋಟೆ ಎಂದು ಸಾಭೀತಿಸಿದ ಮತದಾರರು…!!! ಆಡಳಿತ ವಿರೋಧಿ ಬಣವೇ ಸೋಲಿಗೆ ಕಾರಣ: ಪ್ರತಾಪಗೌಡ ಪಾಟೀಲ…!

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ರಾಜ್ಯ ಸುದ್ದಿಗಳು

ಮಸ್ಕಿ:

CHETAN KENDULI

ಉಪ ಚುನಾವಣೆಯು ಪಕ್ಷದ ಪ್ರತಿಷ್ಠತ ಕಣವಾಗಿ ಪರಿಣಮಿಸಿದ್ದ ಮಸ್ಕಿ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಾರಿ ಮುಖಭಂಗವಾಗಿದ್ದು ಕಾಂಗ್ರಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ ಗೆಲವು ಪಕ್ಕಾ ಆಗಿದೆ. ಮೂರು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದ ಪ್ರತಾಪಗೌಡ ಪಾಟೀಲ ಬಿಜೆಪಿ ಸೋಲಿಗೆ ಆಡಳಿತ ವಿರೋಧಿ ಪಕ್ಷದವರೇ ಕಾರಣ ಎಂದು ಸೋಲೊಪ್ಪಿಕೊಂಡಿದ್ದಾರೆ.

ಹೌದು, ಕಳೆದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದು ಪ್ರತಾಪಗೌಡ ಪಾಟೀಲ. ಆದರೆ ಆಪರೇಷನ್ ಕಮಲಕ್ಕೆ ಒಳಗಾಗಿ ಕಾಂಗ್ರೆಸ್ ತೊರೆದು ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡು ಉಪ ಚುನಾವಣೆಯನ್ನು ಎದುರಿಸಿದ್ದರು. ಆದರೆ ಮಸ್ಕಿ ಕ್ಷೇತ್ರದ ಬಿಜೆಪಿ ಮುಖಂಡರಿಂದಲೇ ನನಗೆ ಸೋಲಾಗಿದೆ ಎಂದು ಪಾಟೀಲ ಹೇಳಿದ್ದಾರೆ. ಒಟ್ಟಿನಲ್ಲಿ ಪಕ್ಷದ ಪ್ರತಿಷ್ಠೆಯನ್ನು ಕಾಂಗ್ರೆಸ್ ಭದ್ರವಾಗಿಸಿಕೊಂಡಿದ್ದು ಮಸ್ಕಿ ಕ್ಷೇತ್ರ ಕಾಂಗ್ರೆಸ್ ಭದ್ರ ಕೋಟೆಯಾಗಿದೆ ಎನ್ನುವುದನ್ನು ಮೊತ್ತೊಮ್ಮೆ ಸಾಬೀತು ಪಡಿಸಿದ್ದಾರೆ ಸ್ಥಳೀಯ ಕಾಂಗ್ರೆಸ್ ಮುಖಂಡರು.

ಕಾಂಗ್ರೆಸ್ ಪಕ್ಷದಿಂದ ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಪಡಿಸಿದ್ದೆ. ಆದರೆ ಉಪ ಚುನಾವಣೆಯಲ್ಲಿ ಮತದಾರರು ನನಗೆ ಆರ್ಶಿವದಿಸಲಿಲ್ಲಾ. ಇದಕ್ಕೆ ಮೂಲ ಕಾರಣ ಆಡಳಿತ ವಿರೋಧ ಬಣವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ ತಿಳಿಸಿದ್ದಾರೆ. ಇನ್ನೂ ಕಳೆದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಬಸನಗೌಡ ತುರ್ವಿಹಾಳ ಅವರು ಕೆಲವೇ ಮತಗಳ ಅಂತರದಿಂದ ಸೋಲು ಅನುಭಿವಿಸಿ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಟಿಕೇಟ್ ಕೈ ತಪ್ಪುವಂತೆ ಮಾಡಲಾಗಿತ್ತು. ಇದಕ್ಕಾಗಿ ಏಕಾಏಕಿ ಕಾಂಗ್ರೆಸ್ ಪಕ್ಷಕ್ಕೆ ಹಾರಿದ ಬಸನಗೌಡ ತುರ್ವಿಹಾಳ ಉಪ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿದ್ದಾರೆ.

ಮಸ್ಕಿ ಕ್ಷೇತ್ರದಲ್ಲಿ ಯಡವಟ್ಟು ಮಾಡಿಕೊಂಡಿತಾ ಭಾರತೀಯ ಜನತಾ ಪಕ್ಷ:

ಕಳೆದ ಬಾರಿ ಬಸನಗೌಡ ತುರ್ವಿಹಾಳ ಅವರಿಗೆ ವಿಧಾನಸಭಾ ಚುನಾವಣೆಯ ಬಿಜೆಪಿ ಟಿಕೇಟ್ ನೀಡಿತ್ತು ಆದರೆ ಬಸನಗೌಡ ಅವರು ಅಂದಿನ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಪ್ರತಾಪಗೌಡ ಪಾಟೀಲ ಅವರಿಂದ ಅತ್ಯಂತ ಕಡಿಮೆ ಮತಗಳಿಂದ ಪರಾಭಗೊಂಡಿದ್ದರು. ನಂತರ ಆಪರೇಷನ್ ಕಮಲದಿಂದ ಪ್ರತಾಪಗೌಡ ಪಾಟೀಲ ಅವರನ್ನು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆ ಮಾಡಲಾಗಿತ್ತು. ಅದರಂತೆ ಬಿಜೆಪಿ ಪಕ್ಷವನ್ನು ತೊರೆದು ಬಸನಗೌಡ ತುರ್ವಿಹಾಳ ಅವರೂ ಕಾಂಗ್ರೆಸ್ ಪಕ್ಷಕ್ಕೆ ಬಂದು ಉಪ ಚುನಾವಣೆಯಲ್ಲಿ ಭರ್ಜರಿ ಗೆಲವನ್ನು ಸಾಧಿಸಿ ಬಿಜೆಪಿಗೆ ಕಮಾಲಮೋಕ್ಷ ಮಾಡಿದಂತಾಗಿದೆ.



 

Be the first to comment

Leave a Reply

Your email address will not be published.


*