199 ಜನ ಗುಣಮುಖ, 661 ಹೊಸ ಪ್ರಕರಣ ದೃಡ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಬಾಗಲಕೋಟೆ: ಜಿಲ್ಲೆಯಲ್ಲಿ 199 ಜನ ಕೋವಿಡ್‍ನಿಂದ ಗುಣಮುಖರಾಗಿ ನಿಗದಿತ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದ್ದು, ಹೊಸದಾಗಿ 661 ಕೊರೊನಾ ಪ್ರಕರಣಗಳು ಹಾಗೂ 7 ಮೃತ ಪ್ರಕರಣಗಳು ಶುಕ್ರವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 21575 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 16930 ಜನ ಕೋವಿಡ್‍ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ದೃಡಪಟ್ಟವರಲ್ಲಿ ಬಾಗಲಕೋಟೆ 255, ಬಾದಾಮಿ 94, ಬೀಳಗಿ 45, ಜಮಖಂಡಿ 131, ಮುಧೋಳ 40 ಹಾಗೂ ಹುನಗುಂದ ತಾಲೂಕಿನ 96 ಜನರಲ್ಲಿ ಸೋಂಕು ದೃಡಪಟ್ಟಿದ್ದು, ಅವರನ್ನು ಸರಕಾರಿ, ಖಾಸಗಿ ಹಾಗೂ ಹೋಮ್ ಐಸೋಲೇಷನ್‍ದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾ ಕೋವಿಡ್ ಲ್ಯಾಬ್‍ನಲ್ಲಿ ಪರಿಕ್ಷಿಸಲಾಗುತ್ತಿದ್ದ 751 ಸ್ಯಾಂಪಲ್‍ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 569020 ಸ್ಯಾಂಪಲ್‍ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಪೈಕಿ 546094 ನೆಗಟಿವ್ ಪ್ರಕರಣ 183 ಮೃತ ಪ್ರಕರಣ ವರದಿಯಾಗಿರುತ್ತದೆ. ಇನ್ನು 4462 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್‍ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*