ಜಿಲ್ಲಾ ಸುದ್ದಿಗಳು
ಬಾಗಲಕೋಟೆ:
ಹುನಗುಂದ ಮತಕ್ಷೇತ್ರದ ಶಾಸಕರಾದ ದೊಡ್ಡನಗೌಡ ಪಾಟೀಲರು ಇಂದು ಹುನಗುಂದ ಇಳಕಲ್ಲ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿರುವ ಆಕ್ಸಿಜನ್ ಸಿಲಿಂಡರ್ ಲಭ್ಯತೆ ಹಾಗೂ ಕೋವಿಡ್ ಸೊಂಕಿತರು ಎದಿರಿಸುತ್ತಿರುವ ಸಮಸ್ಯೆಗಳ ಬಗ್ಗೆ ವೈದ್ಯಾಧಿಕಾರಿಗಳ ಜೊತೆಗೆ ಚರ್ಚಿಸಿದರು.
ನಂತರ ಮಾತನಾಡಿದ ಅವರು, ಕ್ಷೇತ್ರದಲ್ಲಿ ಹೆಚ್ಚು ಮಂದಿ ಸೋಂಕಿಗೆ ಒಳಗಾಗಿದ್ದಾರೆ. ಸೋಂಕಿತರ ಆರೈಕೆಗಾಗಿ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕ ಹೊಂದಿದ್ದು,ಸದಾ ಅಧಿಕಾರಿಗಳು ಪ್ರೋತ್ಸಾಹಿಸುವ ಮೂಲಕ ಕ್ಷೇತ್ರದಲ್ಲಿ ಕೊರೋನಾ ವಿರುದ್ಧ ಪರಿಣಾಮಕಾರಿ ಕೆಲಸಗಳನ್ನು ಮಾಡಿದ್ದಾರೆ ಎಂದರು.
ಜನರ ಕಷ್ಟಕ್ಕೆ ಸ್ಪಂದಿಸುವ ಶಾಸಕರು ಸ್ವತಃ ಹಣ ಭರಿಸಿ ಆಕ್ಸಿಜನ್ ಸಿಲಿಂಡರ್ ಗೆ ಬೇಕಾಗುವ ದ್ರವ್ಯದ ವ್ಯವಸ್ಥೆ ಮಾಡಿಸಿದ್ದಾರೆ. ನಿರಂತರ ಚಿಕಿತ್ಸೆಗಾಗಿ ಹಾಗೂ ಇತರೆ ಸಮಸ್ಯಗಳಿಗಾಗಿ ಶಾಸಕರು ಜಿಲ್ಲಾ ಆರೋಗ್ಯ ಅಧಿಕಾರಿಗಳ ಜೊತೆ ಚರ್ಚಿಸಿ ಇಂದಿನಿಂದಲೆ ಸರ್ಕಾರಿ ಆಸ್ಪತ್ರೆಗಳಲ್ಲಿ ಪರಿಣಾಮಕಾರಿ ಚಿಕಿತ್ಸೆ ದೊರಕಿಸಿಕೊಡುವಂತೆ ಸೂಚಿಸಿದರು.
Be the first to comment