ಬಾಗಲಕೋಟೆ:(ಗುಡೂರ) ಕೋವಿಡ್ ನಿಯಂತ್ರಣಕ್ಕೆ ಹೇರಲಾಗಿರುವ ಜನತಾ ಕರ್ಫ್ಯೂ ನಿಯಮದಲ್ಲಿ ಕೆಲವು ಸಡಿಲಿಕೆ ನೀಡಲಾಗಿದ್ದು,ಅದರಂತೆ ಇಳಕಲ್ಲ ತಾಲೂಕಿನ ಗುಡೂರ ಗ್ರಾಮದಲ್ಲಿ ತಳ್ಳುವ ಗಾಡಿಯಲ್ಲಿ ಹಣ್ಣು ತರಕಾರಿ ವ್ಯಾಪಾರಕ್ಕೆ ಅನುವು ಮಾಡಿಕೊಡಲಾಗಿದೆ.
ಜೊತೆಗೆ ದಿನಸಿ ಅಂಗಡಿಗಳಿಗೆ ಬೆಳಗ್ಗೆ 6 ಗಂಟೆಯಿಂದ ನಾಲ್ಕು ತಾಸುಗಳ ಮಾತ್ರ ತೆಗೆಯಲು ಮಾತ್ರ ನೀಡಲಾಗಿದ್ದ ಅವಕಾಶವನ್ನು ಮಧ್ಯಾಹ್ನ 12 ಗಂಟೆಯವರೆಗೆ ವಿಸ್ತರಣೆ ಮಾಡಲಾಗಿದೆ. ಎಲ್ಲ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ.
ನಾಲ್ಕು ತಾಸುಗಳ ಕಾಲ ಮಾತ್ರ ಅಗತ್ಯ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಿದ್ದರಿಂದ ಮಾರುಕಟ್ಟೆಗಳಲ್ಲಿ ಮತ್ತು ದಿನಸಿ ಅಂಗಡಿಗಳಲ್ಲಿ ಬೆಳಗ್ಗೆ ಜನಸಂದಣಿಯಾಗುತ್ತಿದೆ. ಇದನ್ನು ತಪ್ಪಿಸಲು ವ್ಯಾಪಾರದ ಸಮಯವನ್ನು ಹೆಚ್ಚಿಸಲಾಗಿದೆ. ತಳ್ಳುವ ಗಾಡಿ ಮೂಲಕ ಹಣ್ಣು, ತರಕಾರಿಗಳನ್ನು ದುಬಾರಿ ಬೆಲೆಗೆ ಮಾರಾಟ ಮಾಡದೆ ಮಾರುಕಟ್ಟೆಬೆಲೆಗೆ ಮಾರಾಟ ಮಾಡಲು ಅನುಮತಿ ನೀಡಲಾಗಿದೆ. ಗುಡೂರ ಠಾಣೆಯ ಪೋಲಿಸ್ ಸಿಬ್ಬಂದಿಯವರು, ಗ್ರಾಮಾಡಳಿತದವರು ಇದಕ್ಕೆ ಪೂರಕವಾಗಿ ನಿಯಮಪಾಲನೆಯಲ್ಲಿ ಜನರಿಗೆ ಎಚ್ಚರಿಕೆ ನೀಡುವುದರಲ್ಲಿ ನಿರತರಾಗಿರುತ್ತಾರೆ.
Be the first to comment