ಜಿಲ್ಲಾ ಸುದ್ದಿಗಳು
ಬಾಗಲಕೋಟ:
ಜಿಲ್ಲಾ ಉಸ್ತುವಾರಿ ಸಚಿವರಾದ ಉಮೇಶ ಕತ್ತಿ ರವರ ಅಧ್ಯಕ್ಷತೆಯಲ್ಲಿ ರಬಕವಿ-ಬನಹಟ್ಟಿ ನಗರಸಭೆ ಕಾರ್ಯಾಲಯದಲ್ಲಿ ಕೊರೋನಾ ನಿಯಂತ್ರಿಸುವ ನಿಟ್ಟಿನಲ್ಲಿ ಸಭೆ ಜರುಗಿತು. ನಂತರ ಕೋವಿಡ್ ಸೆಂಟರ್ ಗೆ ಭೇಟಿ ನೀಡಿ ಪರಿಶೀಲಿಸಿ ಸೊಂಕಿತರ ಆರೋಗ್ಯದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಲಾಯಿತು.
ಆಸ್ಪತ್ರೆಯ ಕುಂದು ಕೊರತೆಗಳ ಕುರಿತು ಸಂಬಂಧಿಸಿದ ವೈದ್ಯರಿಂದ ಮಾಹಿತಿ ಪಡೆದುಕೊಂಡು ನಂತರ ಮಾತನಾಡಿದ ಅವರು, ಕೊರೊನಾ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಲಾಗಿದೆ. ಆಕ್ಸಿಜನ್ ಸೇರಿದಂತೆ ಎಲ್ಲ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಹೆಚ್ಚಿನ ನಿಗಾ ವಹಿಸಬೇಕು ಎಂದರು.ಲಸಿಕಾ ಅಭಿಯಾನವನ್ನು ಚುರುಕುಗೊಳಿಸಬೇಕು. ಆರೋಗ್ಯ ಇಲಾಖೆ ಸಿಬ್ಬಂದಿ ಹಗಲೂ ರಾತ್ರಿ ಶ್ರಮಿಸಬೇಕು ಎಂದರು.
ಈ ಸಂದರ್ಭದಲ್ಲಿ ಬಾಗಲಕೋಟೆ ಲೋಕಸಭಾ ಸದಸ್ಯರಾದ ಪಿ.ಸಿ.ಗದ್ದಿಗೌಡರವರು, ಹಾಗೂ ತೇರದಾಳ ಮತ ಕ್ಷೇತ್ರದ ಜನಪ್ರಿಯ ಶಾಸಕ ಸಿದ್ದುಸವದಿ ಮತ್ತು ಎಸ್ ಪಿ ಲೋಕೇಶ ಜಗಲಾಸರ, ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಬೂಬಾಲನ್ ಹಾಗೂ ಇತರರು ಉಪಸ್ಥಿತರಿದ್ದರು.
Be the first to comment