ರಾಜ್ಯ ಸುದ್ದಿಗಳು
ಬೆಂಗಳೂರು:
ಕರೋನ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ಕೆ.ಆರ್.ಪುರದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ
ಆಸ್ಪತ್ರೆ ವೈದ್ಯರನ್ನ ತರಾಟೆಗೆ ತೆಗೆದುಕೊಂಡ ಸಚಿವ ಸುಧಾಕರ್ ಅವರು ವೆಂಟಿಲೇಟರ್ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಂಡು ತುರ್ತು ಚಿಕಿತ್ಸೆಗೆ ಸ್ಪಂದಿಸುವಂತೆ ಸೂಚಿಸಿದರು.
ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇದ್ದರು ಸರ್ಮಪಕವಾಗಿ ಬಳಸಿಕೊಳ್ಳದ ವೈದ್ಯರ ವಿರುದ್ದ ಕೀಡಿಕಾರಿದ ಸಚಿವರು ವೆಂಟಿಲೇಟರ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಿ ಸೌಲಭ್ಯಗಳನ್ನು ಹೆಚ್ಚಿಸುವುದಾಗಿ ತಿಳಿಸಿದರು. ಇಲ್ಲಿನ ಸಾರ್ವಜನಿಕ ಆಸ್ಪತ್ರೆ 100 ಹಾಸಿಗೆ ಸಾಮರ್ಥ್ಯ ಹೊಂದಿದ್ದು,ಇದರಿಂದ ಕರೋನ ಚಿಕಿತ್ಸೆಗೆ ಸರ್ಮಪಕವಾಗಿ ಬಳಸುವ ಕಾರ್ಯ ಮಾಡುವುದಾಗಿ ಹೇಳಿದರು ಹಾಗೂ ಆಸ್ಪತ್ರೆಯಲ್ಲಿ ಕೆಲ ತಾಂತ್ರಿಕೆ ನ್ಯೂನತೆಗಳಿದ್ದು, ಎರಡು ಮೂರುದಿನದಲ್ಲಿ ಸಮಸ್ಯೆ ಬಗೆಹರಿಸುತ್ತೇವೆ ಎಂದು ವಿವರಿಸಿದರು.
Be the first to comment