ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿ ಡಾ.ಮಲ್ಲನಗೌಡ  ಬಿರಾದಾರ ನಿಧನ

ವರದಿ: ಚೇತನ ಕೆಂದೂಳಿ, ಸುದ್ದಿ ಸಂಪಾದಕರು

ಜಿಲ್ಲಾ ಸುದ್ದಿಗಳು

CHETAN KENDULI

ವಿಜಯಪುರ:

ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಉಪಕುಲಪತಿ ಹಾಗೂ ನಗರದ ಹೆಸರಾಂತ ವೈದ್ಯ ಡಾ.ಮಲ್ಲನಗೌಡ      ಎಸ್ ಬಿರಾದಾರ(65) ಉಕ್ಕಲಿ ಅವರು ಇಂದು ಬುಧವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕೊರೊನಾ ರೋಗಿಗಳ ಸೇವೆ ಮಾಡುತ್ತಲೇ ಕೊರೊನಾ ಸೋಂಕಿಗೆ ತುತ್ತಾಗಿದ್ದ ಗುಣಮುಖರಾಗಿದ್ದ ಡಾ.ಎಂ.ಎಸ್.ಬಿರಾದಾರ ಅವರು ವಿಜಯಪುರದ ಮನೆಯಲ್ಲಿ ಹೋಂ ಕ್ವಾರೆಂಟೈನ್ ಆಗಿ ಗುಣಮುಖರಾಗಿದ್ದರು. ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದ ಇವರನ್ನು ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಸೋಲ್ಲಾಪುರದಿಂದ ಏರ್ ಆ್ಯಂಬುಲೇನ್ಸ್ ಮೂಲಕ ಬೆಂಗಳೂರಿಗೆ ಕಳುಹಿಸಿಕೊಡಲಾಗಿತ್ತು. ಆಸ್ಪತ್ರೆಗೆ ದಾಖಲಾಗುವ ಮುನ್ನವೆ ಮಾರ್ಗ ಮಧ್ಯೆ ಮತ್ತೊಮ್ಮೆ ತೀವ್ರ ಹೃದಯಾಘಾತಕ್ಕೆ ಒಳಗಾದ ಇವರಿಗೆ ವೈದ್ಯರು ಹೆಚ್ಚಿನ ಚಿಕಿತ್ಸೆ ಮುಂದುವರೆದಿದ್ದರೂ ಅದು ಫಲಕಾರಿಯಾಗದೇ ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ.

ಡಾ.ಮಲ್ಲನಗೌಡ ಶಿವನಗೌಡ ಬಿರಾದಾರ ಇವರು ಮೂಲತಃ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದವರು. ಗ್ರಾಮೀಣ ರೈತಾಪಿ ಕುಟುಂಬದಿಂದ ಬಂದ ಇವರು ಉಕ್ಕಲಿಯ ಸರ್ಕಾರಿ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣವನ್ನು, ಬಿ.ಎಲ್.ಡಿ.ಇ ನ್ಯೂ ಇಂಗ್ಲಿಷ ಶಾಲೆಯಲ್ಲಿ ಪ್ರೌಢ ಶಿಕ್ಷಣವನ್ನು ಪಡೆದು, ನಂತರ ವಿಜಯಪುರದ ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಪಿಯು ವ್ಯಾಸಂಗ ಮಾಡಿ, ಸರ್ಕಾರಿ ಕೋಟಾದಲ್ಲಿ ಹುಬ್ಬಳಿಯ ಕರ್ನಾಟಕ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಚಿನ್ನದ ಪದಕದೊಂದಿಗೆ ಎಂ.ಬಿ.ಬಿ.ಎಸ್ ಪದವಿಯನ್ನು ಪೂರ್ಣಗೊಳಿಸಿದರು.

ನಂತರ ಬಳ್ಳಾರಿಯಲ್ಲಿ ಎಂ.ಡಿ ಪದವಿಯನ್ನು ಗಳಿಸಿ, ಅದೇ ಜಿಲ್ಲೆಯಲ್ಲಿ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸಿದರು. 1984ರಿಂದ 1991ರವರೆಗೆ ವಿಜಯಪುರ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಾ, ಈ ಭಾಗದಲ್ಲಿ ಜನಾನುರಾಗಿಯಾದರು.

ಸಂತಾಪ ಸೂಚನೆ:

ವೈದ್ಯರಾ ನಿಧನಕ್ಕೆ ಶಾಸಕ ಹಾಗೂ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಬಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಸುನೀಲಗೌಡ ಪಾಟೀಲ, ಗೋವಾ ಕನ್ನಡಿಗರ ಸಂಘದ ಅಧ್ಯಕ್ಷ ಸಿದ್ದಣ್ಣ ಮೇಟಿ, ಸಮಾಜ ಸೇವಕ ಸೋಮನಾಥ ಕಳ್ಳಿಮನಿ, ವಿಜಯಪುರ ಜಿಪಂ ಅಧ್ಯಕ್ಷೆ ಸುಜಾತಾ ಕಳ್ಳಿಮನಿ ಸೇರಿದಂತೆ ಇತರರು ಸಂತಾಪ ಸೂಚಿಸಿದ್ದಾರೆ.

Be the first to comment

Leave a Reply

Your email address will not be published.


*