ಜಿಲ್ಲಾ ಸುದ್ದಿಗಳು
ಬಾಗಲಕೋಟೆ:
ಜಿಲ್ಲೆಯ ಪ್ರತಿ ತಾಲೂಕಿನಲ್ಲಿ ತಲಾ ಒಂದು ಹಾಗೂ ಬಾಗಲಕೋಟೆಯಲ್ಲಿ ಎರಡು ಸೇರಿ ಒಟ್ಟು 10 ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲಾಗಿದ್ದು, 204 ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಇನ್ನು 682 ಬೆಡ್‍ಗಳು ಖಾಲಿ ಇರುವುದಾಗಿ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದರು.
ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಪ್ರತಿ ತಾಲೂಕಿಗೆ ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜಿಲ್ಲಾ ಆಸ್ಪತ್ರೆ, ಕುಮಾರೇಶ್ವರ ಆಸ್ಪತ್ರೆಗಳಿಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಸಂಪೂರ್ಣ ಮೇಲಿಸ್ತುವಾರಿಗಾಗಿ ಹಾಗೂ ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಜಿಲ್ಲೆಯ 6 ಸರಕಾರಿ, 33 ಖಾಸಗಿ ಆಸ್ಪತ್ರೆ ಸೇರಿ ಒಟ್ಟು 39 ಆಸ್ಪತ್ರೆಗಳಲ್ಲಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.
Be the first to comment