ರೆಡ್‍ಕ್ರಾಸ್ ಸಂಸ್ಥೆಯ ಕಾರ್ಯ ಶ್ಲಾಘನೀಯ:ಜಿಲ್ಲಾ ಆಸ್ಪತ್ರೆಗೆ ವೆಂಟಿಲೇಟರ್, ಆಕ್ಸಿಜನ್ ಕನ್ಸೆಂಟ್ರೇಟರ್ಸ್ ಕೊಡುಗೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಬಾಗಲಕೋಟೆ ಜಿಲ್ಲಾ ಶಾಖೆಯು ಕರ್ನಾಟಕ ರಾಜ್ಯ ಶಾಖೆ ಕೊಡಮಾಡಿದ 18 ಲಕ್ಷ ಮೌಲ್ಯದ ಒಂದು ವೆಂಟಿಲೇಟರ್ ಹಾಗೂ ಎರಡು ಆಕ್ಸಿಜನ್ ಕನ್ಸೆಂಟ್ರೇಟರ್ಸಗಳನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ಮುಖಾಂತರ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿಯವರಿಗೆ ಹಸ್ತಾಂತರಿಸಲಾಯಿತು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ವೈದ್ಯಕೀಯ ಉಪಕರಣಗಳನ್ನು ಹಸ್ತಾಂತರಿಸಿದ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಮಾತನಾಡಿ ಉತ್ತಮ ಗುಣಮಟ್ಟದ ವೈದ್ಯಕೀಯ ಉಪಕರಣಗಳನ್ನು ರೆಡ್‍ಕ್ರಾಸ್ ಸಂಸ್ಥೆಯಿಂದ ಕೊಡಲಾಗಿದ್ದು ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ಹೇಳಿದರು. ರೆಡ್ ಕ್ರಾಸ್ ಸಂಸ್ಥೆಯ ಜಿಲ್ಲಾ ಶಾಖೆಯು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವುದನ್ನು ಶ್ಲಾಘಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ರೆಡ್‍ಕ್ರಾಸ್ ಸಂಸ್ಥೆಯ ಜಿಲ್ಲಾ ಸಭಾಪತಿ ಆನಂದ ಜಿಗಜಿನ್ನಿ ಮಾತನಾಡಿ ಕೋವಿಡ್ ಎರಡನೇ ಅಲೆಯ ಈ ಲಾಕ್ ಡೌನ್ ಸಂದರ್ಭದಲ್ಲಿ ಸಾರ್ವಜನಿಕರಿಗೆ ಮತ್ತು ಕಾರ್ಮಿಕರುಗಳಿಗೆ ಮಾಸ್ಕ, ಸೋಪುಗಳನ್ನು ವಿತರಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕೋವಿಡ್ ಕುರಿತ ಜಾಗೃತಿಯನ್ನು ಮೂಡಿಸಿ, ಕೋವಿಡ್ ರೋಗಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಅವರನ್ನು ಸಂಪರ್ಕಿಸಿ ಧೈರ್ಯ ತುಂಬಲಾಗುತ್ತಿದೆ ಎಂದು ತಿಳಿಸಿದರು.

ಬರುವ ದಿನಗಳಲ್ಲಿ ಕಟ್ಟಡ ಕಾರ್ಮಿಕರು ಮತ್ತು ಇತರೆ ಅಸಂಘಟಿತ ಕಾರ್ಮಿಕರುಗಳಿಗೆ ಆಹಾರ ಕೀಟಗಳನ್ನು ವಿತರಿಸುವ ಯೋಜನೆ ಹೊಂದಲಾಗಿದೆ. ಮತ್ತು ಗ್ರಾಮ ಮಟ್ಟದಲ್ಲಿ ಜಾಗೃತಿ ಮೂಡಿಸಲು ಜಾಗೃತಿ ವಾಹನಗಳನ್ನು ಕಳಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಮಹಾದೇವ ಮುರಗಿ, ನಗರದ 5 ಹಾಸಿಗೆ ಆಸ್ಪತ್ರೆಯ ಹಿರಿಯ ವೈದ್ಯಾಧಿಕಾರಿ ಡಾ.ಜಯಶ್ರೀ ಎಮ್ಮಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಡಿ.ಬಿ.ಪಟ್ಟಣಶೆಟ್ಟಿ, ರೆಡ್‍ಕ್ರಾಸ್ ಸಂಸ್ಥೆಯ ಡಾ.ರಾಘವೇದ್ರ ವಣಕಿ, ಶ್ರೀಶೈಲ್ ಬಿರಾದಾರ, ಯುವ ರೆಡ್‍ಕ್ರಾಸ್‍ನ ಪ್ರವೀಣ್ ಹಿರೇಕುಂಬಿ, ಶ್ರೀನಿವಾಸ್ ಪೂಜಾರಿ ಸೇರಿದಂತೆ ಇತರರು ಇದ್ದರು.

Be the first to comment

Leave a Reply

Your email address will not be published.


*