ವಿಜಯಪುರ ಜಿಲ್ಲೆಯಲ್ಲಿ 26 ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆ

ಅಂಬಿಗ ನ್ಯೂಸ್ ಸುದ್ದಿ ಜಾಲ

ವಿಜಯಪುರ ಜಿಲ್ಲೆಯಲ್ಲಿ ಕೋವಿಡ್-19 ಎರಡನೇ ಅಲೆ ಸಂದರ್ಭದಲ್ಲಿ ಒಟ್ಟು 26 ಜನರಿಗೆ ಬ್ಲ್ಯಾಕ್ ಫಂಗಸ್ ಆಗಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

ವಿವಿಧ ಆಸ್ಪತ್ರೆಗಳಲ್ಲಿ ದಾಖಲಾಗಿರುವ ರೋಗಿಗಳಲ್ಲಿ ವೈರಸ್ ಪತ್ತೆಯಾಗಿದ್ದು ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ 15 ಪ್ರಕರಣಗಳು, ಅಲ್-ಅಮೀನ್ ಆಸ್ಪತ್ರೆಯಲ್ಲಿ 1 ಪ್ರಕರಣ, ಆಯುಷ್ ಆಸ್ಪತ್ರೆಯಲ್ಲಿ 5 ಪ್ರಕರಣಗಳು, ಅಶ್ವಿನಿ ಆಸ್ಪತ್ರೆಯಲ್ಲಿ 1 ಪ್ರಕರಣ, ಚೌದರಿ ಆಸ್ಪತ್ರೆಯಲ್ಲಿ 2 ಪ್ರಕರಣ ಹಾಗೂ ಯಶೋಧ ಆಸ್ಪತ್ರೆಯಲ್ಲಿ 2 ರೋಗಿಗಳು ಇದ್ದು

ಒಟ್ಟು ವಿಜಯಪುರ ಜಿಲ್ಲೆಯಲ್ಲಿ 26 ಜನರಿಗೆ ಬ್ಲ್ಯಾಕ್ ಫಂಗಸ್ ಕಂಡುಬಂದಿದೆ. ಇಲ್ಲಿಯವರೆಗೆ ನೇರವಾಗಿ ಬ್ಲಾಕ್ ಫಂಗಸ್ ರೋಗದಿಂದ ಯಾವುದೇ ಸಾವು ಸಂಭವಿಸಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯ ವಿಜಯಪುರದಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*