ರಾಜ್ಯದಲ್ಲಿ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ:ಮೇ-24 ರಿಂದ ಜೂನ್-07 ರವರೆಗೆ:ಮುಖ್ಯಮಂತ್ರಿ ಯಡಿಯೂರಪ್ಪ ಘೋಷಣೆ

ವರದಿ:ಅಂಬಿಗ ನ್ಯೂಸ್ ತಂಡ

ರಾಜ್ಯ ಸುದ್ದಿಗಳು

ಬೆಂಗಳೂರು : ರಾಜ್ಯದಲ್ಲಿ ಮೇ.24ರಿಂದ ಮತ್ತೆ 14 ದಿನ ರಾಜ್ಯಾಧ್ಯಂತ ಕೊರೋನಾ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಸ್ತರಣೆ ಮಾಡಿ, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿಯಮ ಜಾರಿಗೊಳಿಸಲಾಗುತ್ತದೆ. ಮೇ.24ರಿಂದ ನಂತ್ರ ಮತ್ತೆ 14 ದಿನ ಲಾಕ್ ಡೌನ್ ವಿಸ್ತರಣೆ ಮಾಡಲಾಗುತ್ತದೆ. ದಿನಾಂಕ 07-06-2021ರವರೆಗೆ ಲಾಕ್ ಡೌನ್ ವಿಸ್ತರಣೆ ಮಾಡಲಾಗಿದೆ. ಬೆಳಿಗ್ಗೆ 6 ರಿಂದ 10 ರವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಬೆಳಿಗ್ಗೆ 10 ಗಂಟೆ ನಂತ್ರವೂ ಜನರು ತಿರುಗಾಡುತ್ತಿದ್ದಾರೆ. ಇದಕ್ಕೆ ಇನ್ಮುಂದೆ ಅವಕಾಶ ಇಲ್ಲ. ಪೊಲೀಸರಿಗೆ ಸೂಚಿಸಲಾಗಿದೆ. ಕಠಿಣ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*