ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಜಿಲ್ಲೆಯಲ್ಲಿ ಕೋವಿಡ್ನಿಂದ 885 ಜನ ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆ ಮಾಡಲಾಗಿದೆ. ಹೊಸದಾಗಿ 275 ಕೊರೊನಾ ಪ್ರಕರಣಗಳು ಹಾಗೂ 1 ಮೃತ ಪ್ರಕರಣಗಳು ಶುಕ್ರವಾರ ದೃಡಪಟ್ಟಿವೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಇಲ್ಲಿಯವರೆಗೆ ಒಟ್ಟು 30703 ಕೋವಿಡ್ ಪ್ರಕರಣಗಳು ದೃಡಪಟ್ಟಿದ್ದು, ಈ ಪೈಕಿ ಇಲ್ಲಿಯವರೆಗೆ ಒಟ್ಟು 25221 ಜನ ಕೋವಿಡ್ನಿಂದ ಗುಣಮುಖರಾಗಿದ್ದಾರೆ. ಹೊಸದಾಗಿ ಬಾಗಲಕೋಟೆ 119, ಬಾದಾಮಿ 36, ಜಮಖಂಡಿ 35, ಹುನಗುಂದ 39, ಮುಧೋಳ 33, ಬೀಳಗಿ 13 ಜನರಲ್ಲಿ ಸೋಂಕು ದೃಡಪಟ್ಟಿವೆ.
ಕೋವಿಡ್ ಲ್ಯಾಬ್ನಲ್ಲಿ ಪರೀಕ್ಷಿಸಲಾಗುತ್ತಿದ್ದ 1633 ಸ್ಯಾಂಪಲ್ಗಳ ವರದಿಯನ್ನು ನಿರೀಕ್ಷಿಸಲಾಗುತ್ತಿದೆ. ಜಿಲ್ಲೆಯಿಂದ ಇಲ್ಲಿಯವರೆಗೆ ಒಟ್ಟು 603976 ಸ್ಯಾಂಪಲ್ಗಳನ್ನು ಪರೀಕ್ಷೀಸಲಾಗಿದ್ದು, ಈ ಪೈಕಿ 571040 ನೆಗಟಿವ್ ಪ್ರಕರಣ, ಹಾಗೂ 248 ಮೃತ ಪ್ರಕರಣಗಳು ವರದಿಯಾಗಿರುತ್ತದೆ. ಇನ್ನು 5234 ಮಾತ್ರ ಸಕ್ರಿಯ ಪ್ರಕರಣಗಳು ಇವೆ. ಇಲ್ಲಿವರೆಗೆ ಒಟ್ಟು 498 ಸ್ಯಾಂಪಲ್ಗಳು ಮಾತ್ರ ರಿಜೆಕ್ಟ ಆಗಿರುತ್ತವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Be the first to comment