ಮೆಡಿಕಲ್ ಕಿಟ್ ಗಳ ಸಮೇತ “ವೈದ್ಯರ ನಡೆ ಹಳ್ಳಿಗಳ ಕಡೆ”:ರಾಜ್ಯ ಸರ್ಕಾರದ ನೂತನ ಕಾರ್ಯಕ್ರಮ ಅನುಷ್ಠಾನಕ್ಕೆ

ವರದಿ:ಅಂಬಿಗ ನ್ಯೂಸ್ ತಂಡ

ರಾಜ್ಯ ಸುದ್ದಿಗಳು

ಗ್ರಾಮದ ಪ್ರತಿಯೊಬ್ಬ ನಾಗರಿಕರು ಕೋವಿಡ್-19 ತಪಾಸಣೆಗೆ ಒಳಪಡಲು ಅನುಕೂಲವಾಗುವಂತೆ ವೈದ್ಯರ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮವನ್ನು ಪ್ರಾರಂಭಿಸುವ ಪೂರ್ವದಲ್ಲಿ ಕನಿಷ್ಠ ಎರಡು ದಿನಗಳ ಮುಂಚಿತವಾಗಿ ಸಂಬಂಧಿಸಿದ ಗ್ರಾಮ ಪಂಚಾಯಿತಿಗಳು ಈ ಕುರಿತು ಗ್ರಾಮಸ್ಥರಿಗೆ ವ್ಯಾಪಕ ಪ್ರಚಾರ ನೀಡುವುದು.

CHETAN KENDULI

ಬೆಂಗಳೂರು:ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್-19 ವೈರಾಣು ಸೋಂಕನ್ನು ತಡೆಗಟ್ಟಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶವಾಸಿಗಳ ಹಿತದೃಷ್ಟಿಯಿಂದ ಅಂತಿಮ ವರ್ಷದ ವೈದ್ಯಕೀಯ ಪದವಿ ವ್ಯಾಸಂಗ ಮಾಡುತ್ತಿರುವ internship ವಿದ್ಯಾರ್ಥಿಗಳು/ ಬಿ.ಎಸ್.ಸಿ ನರ್ಸಿಂಗ್/ಬಿ.ಡಿ.ಎಸ್/ಎಂ.ಡಿ.ಎಸ್/ಆಯುಷ್ ಪದವೀಧರ ವೈದ್ಯರ ಸೇವೆಯನ್ನು ಎರವಲು ಪಡೆದು ಗ್ರಾಮೀಣ ಭಾಗದ ಸಾರ್ವಜನಿಕರಿಗೆ ಒಂದೇ ಕಡೆ ವೈದ್ಯಕೀಯ ಸೌಲಭ್ಯಗಳು ಸಿಗುವ ವ್ಯವಸ್ಥೆ ಕಲ್ಪಿಸಲಾಗುವುದು.

ವೈದ್ಯರು ಮತ್ತು ಆರೋಗ್ಯ ಸಿಬ್ಬಂದಿಗಳು ಲಭ್ಯವಿದ್ದು ಭೌತಿಕ ಪರೀಕ್ಷೆ ಗಂಟಲು ಮಾದರಿ ಪರೀಕ್ಷೆ ನಡೆಸುವುದು ಮತ್ತು ಸ್ಥಳದಲ್ಲಿಯೇ ಸೂಕ್ತ ಚಿಕಿತ್ಸೆ ನೀಡುವುದು ಹಾಗೂ ಅವಶ್ಯಕತೆಉಳ್ಳವರಿಗೆ ವೈದ್ಯಕೀಯ ಕಿಟ್ ಗಳನ್ನು ವಿತರಿಸುವುದು ಮೊದಲಾದ ಉದ್ದೇಶಗಳಿಗಾಗಿ ಸಂಚಾರಿ ಕ್ಲಿನಿಕ್ ಒಳಗೊಂಡಿರುವ ” ವೈದರ ನಡೆ ಹಳ್ಳಿಗಳ ಕಡೆ” ಎಂಬ ಕಾರ್ಯಕ್ರಮವನ್ನು ಶೀಘ್ರವಾಗಿ ಹಮ್ಮಿಕೊಳ್ಳುವಂತೆ ಮಾನ್ಯ ಕಂದಾಯ ಸಚಿವರು ಹಾಗೂ ಉಪಾಧ್ಯಕ್ಷರು ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಇವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು ಜಿಲ್ಲಾ ಮತ್ತು ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ಹಾಗೂ ಸಂಬಂಧಪಟ್ಟ ಇತರ ಇಲಾಖೆಗಳ ಸಮನ್ವಯದೊಂದಿಗೆ ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಸೂಚಿಸಿದ್ದಾರೆ.

ವೈದ್ಯರ ನಡೆ ಹಳ್ಳಿಗಳ ಕಡೆ ವಿನೂತನ ಕಾರ್ಯಕ್ರಮದ ಮಾರ್ಗಸೂಚಿಗಳು

Be the first to comment

Leave a Reply

Your email address will not be published.


*