ಸಹಾಯಕ ಆರೋಗ್ಯ ಸಿಬ್ಬಂದಿಗಳಿಗೆ ತರಬೇತಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಚಿವಾಲಯವು ಕೋವಿಡ್-19 ಸೋಂಕನ್ನು ನಿಯಂತ್ರಿಸಲು ಪ್ರಧಾನಮಂತ್ರಿ ಕೌಶಲ್ಯ ವಿಕಾಸ ಯೋಜನೆಯಡಿಯಲ್ಲಿ ಹೆಚ್ಚಿನ ಸಹಾಯಕ ಆರೋಗ್ಯ ಸಿಬ್ಬಂದಿಗಳಿಗೆ ಒಂದು ತಿಂಗಳ ತರಬೇತಿ ನೀಡುವ ಸಲುವಾಗಿ ಅರ್ಜಿ ಆಹ್ವಾನಿಸಲಾಗಿದೆ.

ಪಿಯುಸಿ ವಿಜ್ಞಾನ ಕೋರ್ಸ ಮುಗಿಸಿದವರಿಗೆ ಎಮರ್ಜೆನ್ಸಿ ಮೆಡಿಕಲ್ ಟೆಕ್ನಿಷಿಯನ್-ಬೇಸಿಕ್, ಎಸ್‍ಎಸ್‍ಎಲ್‍ಸಿ, 8ನೇ ತರಗತಿ ಓದಿದವರಿಗೆ ಜನರಲ್ ಡ್ಯೂಟಿ ಅಸಿಸ್ಟೆಂಟ್,ಹೋಂ ಹೆಲ್ತ್ ಏಡ್ ಹಾಗೂ ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೋಮಾ ಮೆಡಿಕಲ್ ಎಕ್ವಿಪ್‍ಮೆಂಟ್ ಟೆಕ್ನಾಲಜಿ ಅಸಿಸ್ಟೆಂಟ್, ಪಿಯುಸಿ-ವಿಜ್ಞಾನ ಓದಿದವರಿಗೆ ಫಿಲೆಬೊ ಟಾಮಿಸ್ಟ್ ಕೋರ್ಸಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಅರ್ಜಿ ಸಲ್ಲಿಸುವ ಕೊನೆಯ ದಿನ ಮೇ 28 ಆಗಿದೆ.

ಹೆಚ್ಚಿನ ಮಾಹಿತಿಗಾಗಿ ಸಿ.ಎನ್.ಹೂಸಮನಿ (9538162203), ಎನ್.ಎಸ್.ಯರಗುಡಿ (9449789877) ಹಾಗೂ ಕಛೇರಿಯ ದೂರವಾಣಿ ಸಂಖ್ಯೆ 08354-295210 ಅಥವಾ ಇಮೇಲ್ ಐಡಿ dsdobgk@gmail.com ಗೆ ಸಂಪರ್ಕಿಸುವಂತೆ ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Be the first to comment

Leave a Reply

Your email address will not be published.


*