ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಕೇಂದ್ರ ಪುರಸ್ಕೃತ ಯೋಜನೆಯ ರಾಷ್ಟ್ರೀಯ ಆಯುಷ್ ಅಭಿಯಾನದಡಿಯಲ್ಲಿ ಕೋವಿಡ್-19 ಸೋಂಕಿತರಿಗೆ ವಿತರಿಸುವ ನಿಟ್ಟಿನಲ್ಲಿ ಆಯುಷ್ ಔಷಧಿಗಳ ಕಿಟ್‍ಗಳನ್ನು ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರಿಗೆ ಜಿಲ್ಲಾ ಆಯುಷ ಅಧಿಕಾರಿ ಡಾ.ಮಲ್ಲಣ್ಣ ತೋಟದ ಹಸ್ತಾಂತರಿಸಿದರು.
ಜಿಲ್ಲೆಯಲ್ಲಿರುವ ಕೋವಿಡ್ ಕೇರ ಸೆಂಟರ್‍ಗಳಲ್ಲಿರುವ ಕೋವಿಡ್-19 ಅ-ಸಿಮ್ಟಮೀಟಿಕ್ ಹಾಗೂ ಮೈಲ್ಡ್ ಪಾಸಿಟಿವ್ ರೋಗಿಗಳಿಗೆ ವಿತರಿಸಲು ಭಾರತ ಸರ್ಕಾರದ ಆಯುಷ್ ಮಂತ್ರಾಲಯ ಇತ್ತೀಚಿಗೆ ಹೊರಡಿಸಿರುವ ಮಾರ್ಗಸೂಚಿಗಳ ಅನುಸಾರ ಆಯುಷ್-64, ಅಶ್ವಗಂಧ ಚೂರ್ಣ, ಚವನಪ್ರಾಶ್, ಸಂಶಮನಿ ವಟಿ, ಶರಬತ್-ಎ-ಉನ್ನಬ್ ಈ 5 ಆಯುಷ್ ಔಷಧಿಗಳ ಕಿಟ್‍ಗಳನ್ನು ಹಸ್ತಾಂತರಿಸಿದರು.
ಜಿಲ್ಲೆಗೆ ಪ್ರಥಮ ಹಂತದಲ್ಲಿ 2000 ಆಯುಷ್ ಔಷಧಿ ಕಿಟ್‍ಗಳು ಪೂರೈಕೆಯಾಗಿದ್ದು, ಸಾಂಕೇತಿಕವಾಗಿ ಜಿಲ್ಲಾಧಿಕಾರಿಗಳಿಂದ ಸದರಿ ಔಷಧಿಗಳನ್ನು ವಿತರಿಸಲು ಚಾಲನೆ ನೀಡಲಾಯಿತು. ಇದೇ ಸಂದರ್ಭದಲ್ಲಿ ಆಯುಷ ಇಲಾಖೆಯ ಹಿರಿಯ ವೈದ್ಯಾಧಿಕಾರಿ ಡಾ.ಚಂದ್ರಕಾಂತ ರಕ್ಕಸಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
Be the first to comment