ಕೋವಿಡ್ : ಸಹಾಯಧನಕ್ಕಾಗಿ ಕಲಾವಿದರಿಂದ ಅರ್ಜಿ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ :ಕೋವಿಡ್-19 ಹಿನ್ನಲೆಯಲ್ಲಿ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ಮುಖ್ಯಮಂತ್ರಿಗಳ ಘೋಷಣೆಯನ್ವಯ ಕನ್ನಡ ಮತ್ತು ಸಂಸ್ಕೃತ ಇಲಾಖೆಯ ವತಿಯಿಂದ 3 ಸಾವಿರ ರೂ.ಗಳ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದ್ದು, ಎಲ್ಲ ಪ್ರಕಾರದ ಕಲಾವಿದರು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿ ಸಲ್ಲಿಸುವ ಕಲಾವಿದರು 35 ವರ್ಷ ಮೇಲ್ಪಟ್ಟವರಾಗಿರಬೇಕು. ಕನಿಷ್ಟ 10 ವರ್ಷಗಳ ಕಲಾ ಸೇವೆ ಸಲ್ಲಿಸಿರಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಮಾಶಾಸನ ಪಡೆಯುತ್ತಿರುವ ಹಾಗೂ ಸರ್ಕಾರಿ ನೌಕರರಾಗಿದ್ದಲ್ಲಿ ಈ ಯೋಜನೆ ಅನ್ವಯಿಸುವದಿಲ್ಲ. 2020-21ನೇ ಸಾಲಿನ ಸಾಮಾನ್ಯ, ವಿಶೇಷ ಘಟಕ, ಗಿರಿಜನ ಉಪಯೋಜನೆಯಡಿ ಸಾಂಸ್ಕೃತಿಕ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಧನಸಹಾಯ ಪಡೆದ, ವಾದ್ಯಪರಿಕರ, ವೇಷಭೂಷನ ಖರೀದಿ, ಶಿಲ್ಪಕಲೆ, ಚಿತ್ರಕಲಾ ಪ್ರದರ್ಶನಕ್ಕೆ ಧನ ಸಹಾಯ ಪಡೆದವರು ಈ ಯೋಜನೆಯಡಿ ಅರ್ಜಿ ಸಲ್ಲಿಸುವಂತಿಲ್ಲ.

ಕೋವಿಡ್-19 2ನೇ ಅಲೆಯಿಂದ ಸಂಕಷ್ಟದಲ್ಲಿರುವ ಕಲಾವಿದರು ತಮ್ಮ ಹೆಸರು, ವಿಳಾಸ, ಕಲಾ ಪ್ರಕಾರ, ಮೊಬೈಲ್, ಆಧಾರ ಸಂಖ್ಯೆ, ಬ್ಯಾಂಕ್ ಖಾತೆ ವಿವರಗಳನ್ನೊಳಗೊಂಡ ವಿವರವನ್ನು ಜಿಲ್ಲೆಯ ನಾಗರಿಕ ಸೇವಾ ಕೇಂದ್ರಗಳು ಅಥವಾ ಮೊಬೈಲ್ ಮೂಲಕ ಸೇವಾ ಸಿಂಧು ಪೋರ್ಟಲ್‍ನಲ್ಲಿಯೇ ಜೂನ್ 5ರ ಒಳಗಾಗಿ ಅರ್ಜಿಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಮತ್ತು ಸಂಸ್ಕೃತಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಹೇಮಾವತಿ ಎನ್ (9482121281) ಕಚೇರಿ ಸಿಬ್ಬಂದಿ ರಾಜೇಶ (8073942288) ನಾಗರಾಜ (9945367801) ಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Be the first to comment

Leave a Reply

Your email address will not be published.


*