ಜಿಲ್ಲಾ ಸುದ್ದಿಗಳು
ಆದ್ಯತಾ ವಲಯದಲ್ಲಿ ಬರುವ ಎಲ್ಲ ಫ್ರಂಟ್‍ಲೈನ್ ವಾರಿಯರ್ಸ್‍ಗಳಿಗೆ ಲಸಿಕಾಕರಣ ಕಾರ್ಯವನ್ನು ಜೂನ್ 1 ರೊಳಗಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ನೋಡಲ್ ಅಧಿಕಾರಿಗಳಿಗೆ ಸೂಚಿಸಿದರು.
ಬಾಗಲಕೋಟೆ : ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿಂದು ಕೋವಿಡ್ ನಿಯಂತ್ರಣದ ಮಾರ್ಗಸೂಚಿ ಹಾಗೂ ಲಸಿಕಾಕರಣ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಆದ್ಯತಾ ವಲಯದಲ್ಲಿ ಬರುವ ಹೆಸ್ಕಾಂ, ನೀರು ಸರಬರಾಜು ಸಿಬ್ಬಂದಿ, ಶಿಕ್ಷಕರು, ಸಾರಿಗೆ ಸಿಬ್ಬಂದಿಗಳು, ಆಟೋ-ಕ್ಯಾಬ್ ಚಾಲಕರು, ಕಾರ್ಮಿಕರು, ಅಂಗವಿಕಲರು, ಅಂಚೆ, ಬ್ಯಾಂಕ್ ನೌಕರರಿಗೆ, ಗ್ಯಾಸ್ ಸರಬರಾಜು ವಿತರಕರು, ಎಪಿಎಂಸಿ ಸಿಬ್ಬಂದಿಗಳಿಗೆ ಕೋವಿಡ್ ಲಸಿಕೆ ನೀಡುವ ಕಾರ್ಯ ಚುರುಕುಗೊಳಿಸಿ ಎಲ್ಲ ನೋಡಲ್ ಅಧಿಕಾರಿಗಳು ಆಸಕ್ತಿಯಿಂದ ಪೂರ್ಣಗೊಳಿಸಲು ತಿಳಿಸಿದರು.
ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರಗಳವಾರು ತಮ್ಮ ತಮ್ಮ ಸಬ್‍ಸೆಂಟರ್‍ಗಳಲ್ಲಿ ಲಸಿಕಾರಣ ಪ್ರಗತಿ ಬಗ್ಗೆ ಆಯಾ ತಾಲೂಕಾ ಆರೋಗ್ಯಾಧಿಕಾರಿಗಳು ಮಾಹಿತಿ ನೀಡಬೇಕು. ಅಲ್ಲದೇ ಲಸಿಕಾರಣದ ಬಗ್ಗೆ ಪೋರ್ಟಲ್‍ನಲ್ಲಿ ದಾಖಲಿಸಬೇಕು. ಬಾಕಿ ಉಳಿದಿದ್ದರೆ ಎರಡು ದಿನಗಳಲ್ಲಿ ಪೂರ್ಣಗೊಳಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು. ಆದ್ಯತಾ ವಲಯ ಹಾಗೂ ಎರಡನೇ ಡೋಸ್ ಲಸಿಕಾರಣ ಕಾರ್ಯ ಜೂನ್ 1ಕ್ಕೆ ಪೂರ್ಣಗೊಳಿಸುವ ಜವಾಬ್ದಾರಿ ಜಿಲ್ಲಾ ಮತ್ತು ತಾಲೂಕಾ ಮಟ್ಟದ ನೋಡಲ್ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ ಮಾತನಾಡಿ ಜಿಲ್ಲೆಯಲ್ಲಿ 24 ಸಾವಿರ ಕೋವಾಕ್ಸಿನ್ ಮೊದಲನೇ ಡೋಸ್ ಪಡೆದವರಲ್ಲಿ ಬಾಕಿ ಉಳಿದಿದ್ದು, ಈಗಾಗಲೇ ನಮ್ಮಲ್ಲಿ 12800 ಡೋಸ್ ಲಸಿಕೆ ಲಭ್ಯವಿರುತ್ತದೆ. ಹೊಸದಾಗಿ 9 ಸಾವಿರ ಕೋವಾಕ್ಸಿನ್ ಲಸಿಕೆ ಸರಬರಾಜು ಆಗಿರುತ್ತದೆ. 45 ವರ್ಷ ಮೇಲ್ಪಟ್ಟವರಿಗೆ ಕೋವಿಶಿಲ್ಡ್ ಲಸಿಕೆ ಬಂದಿದ್ದು, ಎರಡನೇ ಡೋಸ್ ನೀಡುವುದಾಗಿ ಸಭೆಗೆ ತಿಳಿಸಿದರು.
ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಟಿ.ಭೂಬಾಲನ ಮಾತನಾಡಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದಡಿ ಮನೆ ಮನೆ ಸರ್ವೆ ಕಾರ್ಯ 3-4 ದಿನಗಳಲ್ಲಿ ಮೊದಲ ಸುತ್ತಿನ ಕಾರ್ಯ ಪೂರ್ಣಗೊಳಿಸಬೇಕು. ಗ್ರಾಮದ ಪ್ರತಿಯೊಂದು ಕುಟುಂಬಸ್ಥರ ಪಲ್ಸ್, ಆಕ್ಸಿಮಿಟರ್ ಚೆಕ್ ಮಾಡಬೇಕು. ಅಲ್ಲದೇ ಬ್ಲ್ಯಾಕ್ ಫಂಗಸ್ ಬಗ್ಗೆ ತಿಳುವಳಿಕೆ ನೀಡಬೇಕು. ಸೋಂಕಿತರ ಪ್ರಾಥಮಿಕ ಮತ್ತು ದ್ವಿತೀಯ ಸಂಪರ್ಕ ಹೊಂದಿದವರನ್ನು ದಾಖಲಿಸಲು ತಿಳಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲೋಕೇಶ ಜಗಲಾಸರ ಮಾತನಾಡಿ ಲಾಕ್‍ಡೌನ್ ಸಂದರ್ಭದಲ್ಲಿ ಪ್ರಾರಂಭದಲ್ಲಿ ಉಲ್ಲಂಘನೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿತ್ತು. ಆದರೆ ಈಗ ಅವುಗಳ ಸಂಖ್ಯೆ ಕಡಿಮೆಯಾಗುತ್ತಿವೆ. ಜಿಲ್ಲೆಯಲ್ಲಿ ಜಾತ್ರೆಗಳು ನಡೆಯದಂತೆ ಕ್ರಮವಹಿಸಬೇಕು. ಜಾತ್ರೆಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾದಲ್ಲಿ ಪೊಲೀಸ್ ಇಲಾಖೆಗೆ ಮಾಹಿತಿ ನೀಡಲು ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಉಪ ವಿಭಾಗಾಧಿಕಾರಿ ಎಂ.ಗಂಗಪ್ಪ, ಜಿಲ್ಲಾ ಸಮೀಕ್ಷನಾಧಿಕಾರಿ ಡಾ.ವಿಜಯ ಕಂಠಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕುಸುಮಾ ಮಾಗಿ ಸೇರಿದಂತೆ ಜಿಲ್ಲಾ ಮತ್ತು ತಾಲೂಕಾ ಮಟ್ಟದ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.
ವೈದ್ಯರ ನಡೆ ಹಳ್ಳಿಯ ಕಡೆ
ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬಸ್‍ಗಳಲ್ಲಿ ವೈದ್ಯರನ್ನು ಹಳ್ಳಿಯ ಕಡೆ ಕಳುಹಿಸಲಾಗುತ್ತಿದೆ. ವೈದ್ಯರು ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಕುಟುಂಬ ಸದಸ್ಯರ ತಪಾಸಣೆ, ಕೌನ್ಸಲಿಂಗ್ ಹಾಗೂ ಕೋವಿಡ್ ಲಕ್ಷಣಗಳಿದ್ದಲ್ಲಿ ಔಷಧಿ ಕಿಟ್‍ಗಳನ್ನು ಸಹ ವಿತರಿಸಲಾಗುತ್ತಿರುವ ಕಾರ್ಯ ಈಗಾಗಲೇ ನಡೆದಿದ್ದು, ಇದರಿಂದ ಹಳ್ಳಿಗಳಲ್ಲಿ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿವೆ.
– ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾಧಿಕಾರಿ
Be the first to comment