ಜಿಲ್ಲಾ ಸುದ್ದಿಗಳು
ದೇವನಹಳ್ಳಿ:
ಪಟ್ಟಣದ ಪೊಲೀಸ್ ಠಾಣೆಗೆ ನೂತನವಾಗಿ ಇನ್ಸ್ಪೆಕ್ಟರ್ ಆಗಿ ನೇಮಕಗೊಂಡ ಜೆ.ರಮೇಶ್ ಅಧಿಕಾರ ಸ್ವೀಕರಿಸಿದರು.
ಈ ಹಿಂದೆ ಇದ್ದ ಇನ್ಸ್ಪೆಕ್ಟರ್ ಸಿದ್ಧರಾಜು ನಿವೃತ್ತಿ ಹೊಂದಿದ್ದರು. ಅವರ ಜಾಗಕ್ಕೆ ಪ್ರಭಾರ ಇನ್ಸ್ಪೆಕ್ಟರ್ ಆಗಿ ಮೊಹಮ್ಮದ್ ರಫಿ ಅವರನ್ನು ನೇಮಿಸಲಾಗಿತ್ತು. ಅವರ ಸ್ಥಾನಕ್ಕೆ ಸರಕಾರ ಜೆ.ರಮೇಶ್ ಅವರನ್ನು ನೇಮಕ ಮಾಡಿದೆ. ಇವರು ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಇದೀಗ ದೇವನಹಳ್ಳಿ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಈ ಹಿಂದೆ ಇದ್ದ ಇನ್ಸ್ಪೆಕ್ಟರ್ ಮೊಹಮ್ಮದ್ ರಫೀ ಅವರನ್ನು ಈ ಮೊದಲು ಕಾರ್ಯನಿರ್ವಹಿಸುತ್ತಿದ್ದ ಠಾಣೆಗೆ ಮತ್ತೇ ವರ್ಗಾಯಿಸಲಾಗಿದೆ.
ನೂತನ ಇನ್ಸ್ಪೆಕ್ಟರ್ ಜೆ.ರಮೇಶ್ ಮಾತನಾಡಿ, ಪಟ್ಟಣದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದೆ, ಶಾಂತಿಯುತ ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆಯನ್ನು ನೀಡಲಾಗುವುದು. ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದರಿಂದ ಜನರು ಸಹ ಮನೆಯಿಂದಾಚೆ ಬರದೆ, ಮನೆಯಲ್ಲಿಯೇ ಇದ್ದು, ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಪ್ರತಿಯೊಬ್ಬರಿಗೂ ಕೊರೊನಾ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಗುರುಮೂರ್ತಿ ಬೂದಿಗೆರೆ
8861100990
Be the first to comment