ಧರ್ಮಸ್ಥಳ ಟ್ರಸ್ಟ್ ನಿಂದ ಜಿಲ್ಲೆಗೆ 5 ಟನ್ ಆಕ್ಸಿಜನ್

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು 

ಬಾಗಲಕೋಟೆ : ಕೋವಿಡ್ 2ನೇ ಅಲೆ ಹಿನ್ನಲೆಯಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್‍ನ ವತಿಯಿಂದ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ 5 ಟನ್ ಪ್ರಾಣ ವಾಯು ಆಕ್ಸಿಜನ್‍ನ್ನು ಕೊಡುಗೆಯಾಗಿ ನೀಡಲಾಯಿತು.

ಗುರುವಾರ ಜಿಲ್ಲೆಗೆ ಆಗಮಿಸಿದ ಆಕ್ಸಿಜನ್ ಟ್ಯಾಂಕರನ್ನು ನವನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಶಾಸಕ ವೀರಣ್ಣ ಚರಂತಿಮಠ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರು ಬರಮಾಡಿಕೊಂಡರು. ಧರ್ಮಸ್ಥಳದ ಟ್ರಸ್ಟ್‍ನ ಕಲ್ಯಾಣ ಕರ್ನಾಟಕದ ಪ್ರಾದೇಶಿಕ ನಿರ್ದೇಶಕ ಪುರುಶೋತ್ತಮ ಪಿ.ಕೆ. ಆಕ್ಸಿಜನ್ ಹಸ್ತಾಂತರಿಸುವ ಕಾರ್ಯ ಮಾಡಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೀರಣ್ಣ ಚರಂತಿಮಠ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ವಿರೇಂದ್ರ ಹೆಗಡೆಯವರು ತಮ್ಮ ಗ್ರಾಮೀಣಾಭಿವೃದ್ದಿ ಟ್ರಸ್ಟ್‍ನ ಮೂಲಕ ಕೋವಿಡ್ ನಂತಹ ಸಂದರ್ಭದಲ್ಲಿ ರಾಜ್ಯದ ತುಂಬಾ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಗೆ 5 ಕಾನ್ಸಂಟ್ರೇಟರ್ ಹಾಗೂ 5 ಟನ್ ಆಕ್ಸಿಜನ್ ಕೊಡುಗೆಯಾಗಿ ನೀಡಿರುವುದಕ್ಕೆ ಪೂಜ್ಯರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಧರ್ಮಸ್ಥಳದ ಮಂಜುನಾಥನ ಕೃಪೆಯಿಂದ ಕೋವಿಡ್ ಮಹಾಮಾರಿ ಬೇಗನೇ ನಾಶವಾಗಲೆಂದು ಪ್ರಾರ್ಥಿಸುವುದಾಗಿ ತಿಳಿಸಿದರು.

ಧರ್ಮಸ್ಥಳ ಟ್ರಸ್ಟ್‍ನ ಪ್ರಾದೇಶಿಕ ನಿರ್ದೇಶಕ ಪುರುಶೋತ್ತಮ ಪಿ.ಕೆ ಮಾತನಾಡಿ ರಾಜ್ಯದ ತುಂಬಾ ಒಟ್ಟು 3.93 ಕೋಟಿ ರೂ.ಗಳ ಮೌಲ್ಯದ 285 ಕಾನ್ಸಂಟ್ರೇಟರ್, 20 ವೆಂಟಿಲೇಟರ್, 8 ಹೈಪ್ಲೋ ಮಷಿನ್, 45 ಟನ್ ಆಕ್ಸಿಜನ, 10 ಸಾವಿರ ಫುಡ್ ಕಿಟ್, ಸಾನಿಟೈಜರ್, ಮಾಸ್ಕ, ಮೆಡಿಷನ್, ಬೆಡ್‍ಶೀಟ್ ಹಾಗೂ 250 ತಾತ್ಕಾಲಿಕ ಅಂಬುಲೆನ್ಸ್ ವ್ಯವಸ್ಥೆ ಮಾಡಿರುವುದಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷರಾದ ಜ್ಯೋತಿ ಭಜಂತ್ರಿ, ಸದಸ್ಯರಾದ ಪ್ರಕಾಶ ಹಂಡಿ, ರವೀಂದ್ರ ಹಂಡಿ, ರಂಗನಗೌಡರ ದಂಡನ್ನವರ, ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಪ್ರಕಾಶ ಬಿರಾದಾರ, ಧರ್ಮಸ್ಥಳ ಟ್ರಸ್ಟ್‍ನ ಜಿಲ್ಲಾ ನಿರ್ದೇಶಕ ಮಹೇಶ ಎಂ.ಡಿ, ಯೋಜನಾಧಿಕಾರಿ ಜ್ಯೋತಿ ಜೋಳದ ಸೇರಿದಂತೆ ಇತರರು ಉಪಸ್ಥಿತರಿದ್ದರು. ನಂತರ ಜಿಲ್ಲಾ ಆಸ್ಪತ್ರೆಯಲ್ಲಿರುವ ಪ್ರಾಣ ವಾಯು ಆಕ್ಸಿಜನ್ ಪ್ಲಾಂಟ್‍ಗೆ ಶಾಸಕ ವೀರಣ್ಣ ಚರಂತಿಮಠ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Be the first to comment

Leave a Reply

Your email address will not be published.


*