ಇಲಕಲ್ಲ ತಾಲೂಕಾ ದಂಡಾಧಿಕಾರಿ ನಿಂಗಣ್ಣ ಬಿರಾದಾರ ಹಾಗೂ ಕೆಲೂರ ಗ್ರಾಮ ಪಂಚಾಯತಿ ಅಧ್ಯಕ್ಷ ಮಹಾಲಿಂಗೇಶ ನಾಡಗೌಡರಿಂದ “ವೈಧ್ಯರ ನಡೆ ಹಳ್ಳಿ ಕಡೆಗೆ” ಚಾಲನೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಜಿಲ್ಲೆಯ ಗ್ರಾಮೀಣ ಭಾಗಗಳಲ್ಲಿ ಕೋವಿಡ್‌ ಸೋಂಕು ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ರೋಗ ನಿಯಂತ್ರಣ ಹಾಗೂ ಜಾಗೃತಿಗಾಗಿ ರೂಪಿಸಿರುವ “ವೈದ್ಯರ ನಡೆ ಹಳ್ಳಿ ಕಡೆ’ ಎಂಬ ಕಾರ್ಯಕ್ರಮಕ್ಕೆ ಇಲಕಲ್ಲ ತಾಲೂಕಾ ದಂಡಾಧಿಕಾರಿಗಳಾದ ನಿಂಗಣ್ಣ ಬಿರಾದಾರ ಮತ್ತು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹಾಲಿಂಗೇಶ ನಾಡಗೌಡರ ಚಾಲನೆ ನೀಡಿದರು.

ಬಾಗಲಕೋಟೆ:(ಕೆಲೂರ) ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕ ಪ್ರಮಾಣದಲ್ಲಿ ಕೋವಿಡ್‌ ಪರೀಕ್ಷೆ ಮಾಡಿ ಸೋಂಕು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವುದು, ಕೋವಿಡ್‌ ಸೋಂಕಿನ ಪ್ರಸರಣದ ಸರಪಳಿ ತುಂಡರಿಸುವುದು, ಜನರನ್ನು ಪರೀಕ್ಷೆಗೆ ಒಳಪಡಿಸಿ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡುವುದು “ವೈದ್ಯರ ನಡೆ ಹಳ್ಳಿ ಕಡೆ” ಕಾರ್ಯಕ್ರಮದ ಉದ್ದೇಶವಾಗಿದೆ.

ತಾಲ್ಲೂಕಿನ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಬಾರದೆಂಬ ಉದ್ದೇಶದಿಂದ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಮೂಲಕ ಸೋಂಕು ಕಡಿಮೆ ಮಾಡಲು ಪ್ರಯತ್ನಿಸಲಾಗುತ್ತಿದೆ. ಎಂದು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಮಹಾಲಿಂಗೇಶ ನಾಡಗೌಡರ ತಿಳಿಸಿದರು.


ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ಹರಡುತ್ತಿರುವ ಹಿನ್ನಲೆಯಲ್ಲಿ ಮನೆ ಮನೆ ಆರೋಗ್ಯ ತಪಾಸಣೆ ಕೈಗೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡ ವೈದ್ಯರ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ
ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ ರಾಜ್ ಇಲಾಖೆ, ಆರೋಗ್ಯ ಇಲಾಖೆ,ಕಂದಾಯ ಇಲಾಖೆಯವರ ಸಹಯೋಗದಲ್ಲಿ ವೈದ್ಯರ ನಡೆ ಹಳ್ಳಿಯ ಕಡೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೋವಿಡ್ ಒಬ್ಬರಿಂದ ಒಬ್ಬರಿಗೆ ಹರಡಬಹುದಾದ ಸಾಂಕ್ರಾಮಿಕ ರೋಗವಾಗಿದೆ. ಕೋವಿಡ್ ನಿಂದಾಗುವ ಪರಿಣಾಮದ ಕುರಿತು ದಿನನಿತ್ಯ ಕೇಳುತ್ತಿದ್ದೀರಿ. ನಗರದಿಂದ ಈಗ ಗ್ರಾಮ ಮಟ್ಟದಲ್ಲಿ ಈ ಸೋಂಕು ಹರಡುತ್ತಿದ್ದು, ಅದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.ವೈದ್ಯರು, ನರ್ಸ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರನ್ನೊಳಗೊಂಡ ತಂಡವು ಗ್ರಾಮದ ಪ್ರತಿಯೊಂದು ಮನೆಗಳಿಗೆ ತೆರಳಿ ಆರೋಗ್ಯ ತಪಾಸಣೆ ಕೈಗೊಳ್ಳಲಿದ್ದಾರೆ.ಎಲ್ಲ ಗ್ರಾಮಸ್ಥರು ಇದಕ್ಕೆ ಸಹಕಾರ ನೀಡಬೇಕು. ತಪಾಸಣೆಯಿಂದ ಆರೋಗ್ಯದ ಸ್ಥಿತಿಗತಿಗೆ ಅನುಗುಣವಾಗಿ ಔಷಧಗಳನ್ನು ಸಹ ನೀಡಲಿದ್ದಾರೆ. ಕೆಮ್ಮು, ನೆಗಡಿ, ಜ್ವರಗಳು ಬಂದಲ್ಲಿ ಔಷಧಗಳ ಕಿಟ್ ಸಹ ನೀಡಲಿದ್ದಾರೆ. ಇದರಿಂದ ಪ್ರಾರಂಭದಲ್ಲಿಯೇ ಅದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ. ಸೋಂಕು ದೇಹದೊಳಗೆ ಸೇರಿ ಉಲ್ಬಣವಾಗುವವರೆಗೆ ಬಿಡಬಾರದು ಎಂಬ ದೃಷ್ಠಿಯಿಂದ ಪ್ರಾರಂಭದಲ್ಲಿಯೇ ಪತ್ತೆ ಹಚ್ಚುವ ಉದ್ದೇಶವಾಗಿದೆ ಎಂದು ತಿಳಿಸಿದರು.ತಾಲೂಕಿನಾದ್ಯಂತ ಈಗ ಪ್ರತಿ ದಿನ ಕೆವಲ 10 ರಿಂದ 12 ಸೊಂಕಿತರು ಮಾತ್ರ ಕಂಡು ಬರುತ್ತಿದ್ದು ದಿನೆ ದಿನೆ ಈ ಸಂಖ್ಯೆ ಕೂಡಾ ಇಳಿಮುಖವಾಗಲಿದೆ.ಇದಕ್ಕೆ ಶ್ರಮವಹಿಸಿದ ಗ್ರಾಮ ಪಂಚಾಯತಿ ಇಲಾಖೆಯ ಸಿಬ್ಬಂದಿಯವರಿಗೆ, ಕಂದಾಯ ಇಲಾಖೆಯ ಸಿಬ್ಬಂದಿಯವರಿಗೆ,ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಹಾಗೂ ಗ್ರಾಮದ ಟಾಸ್ಕಪೋಸ್೯ ಕಮಿಟಿಗೆ ಅಭಿನಂದನೆಗಳನ್ನು ತಿಳಿಸಿದರು.

ನಿಂಗಣ್ಣ ಬಿರಾದಾರ ತಾಲೂಕಾ ದಂಡಾಧಿಕಾರಿಗಳು ಇಲಕಲ್ಲ


ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಸದಸ್ಯರು,ಕಂದಾಯ ಇಲಾಖೆಯ ಸ್ಥಿರಸ್ತೆದಾರರಾದ ಈಶ್ವರ ಗಡ್ಡಿ,ಕಂದಾಯ ನಿರೀಕ್ಷಕರಾದ ನವೀನ ಬಲಕುಂದಿ,ಗ್ರಾಮ ಲೆಕ್ಕಾಧಿಕಾರಿ ಧರ್ಮಣ್ಣ ಯತ್ನಟ್ಟಿ, ಪಂಚಾಯತಿ ಅಭಿವೃದ್ದಿ ಅಧಿಕಾರಿಗಳಾದ ಪಿ.ಬಿ.ಮುಳ್ಳೂರ,, ಪ್ರಾಥಮಿಕ ಆರೋಗ್ಯ ಕೇಂದ್ರದ ವೈಧ್ಯಾಧಿಕಾರಿ ಡಾ.ರಾಘವೇಂದ್ರ ಸವದತ್ತಿ,ಕುಮಾರೇಶ್ವರ ಅಸ್ಪತ್ರೆಯ ವೈಧ್ಯರಾದ ಡಾ.ಸಚಿನ್,ನೋಡಲ್ ಅಧಿಕಾರಿ ಕೆ.ಎಸ್.ಆರ್.ಟಿ.ಸಿ.ಡಿಪೋ ಮ್ಯಾನೇಜರ್ ಸೊನ್ನದ,ಆರೋಗ್ಯ ಸಹಾಯಕಿ ಕುಸುಮಾ ಮಡಿವಾಳರ, ಗ್ರಾಮ ಪಂಚಾಯತಿ ಸಿಬ್ಬಂದಿ,ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*