ಶ್ರೀ ಗುರು ಮಂಟೇಶ್ವರ ಪ್ರೌಢ ಶಾಲೆಯಲ್ಲಿ ಪಕೃತಿ ಯುಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ವರದಿ: ಶರಣಪ್ಪ, ಬಾಗಲಕೋಟೆ

 

ಹಸಿರೆ ಉಸಿರು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಷಯ. ಆದರೂ ಪ್ರಪಂಚದಾದ್ಯಂತ ಪರಿಸರವನ್ನು ನಾಶಮಾಡಿ ಕಾಂಕ್ರೀಟ್ ಹಾಸಿಗೆಯನ್ನು ಹಾಕುತ್ತಿರುವುದರಿಂದ,ನಾವು ಕೆಲವೇ ವರ್ಷಗಳಲ್ಲಿ ವಿನಾಶದ ಹಾದಿಯನ್ನು ತುಳಿಯುತ್ತಿದ್ದೇವೆ. ಪ್ರಸ್ತುತ ಜಗತ್ತಿನಲ್ಲಿ ಆಧುನಿಕತೆ, ನಗರೀಕರಣ, ಕೈಗಾರೀಕರಣ, ವಿಜ್ಞಾನ, ತಂತ್ರಜ್ಞಾನ ಅಭಿವೃದ್ಧಿ ಎಂಬ ಹತ್ತು ಹಲವು ಕಾರಣಗಳಿಂದ ಪರಿಸರದಲ್ಲಿ ವಾಯುಮಾಲಿನ್ಯ, ಜಲಮಾಲಿನ್ಯ, ಭೂ ಮಾಲಿನ್ಯ, ಶಬ್ದ ಮಾಲಿನ್ಯ ಹೆಚ್ಚಾಗುತ್ತಿದೆ.

ಬಾಗಲಕೋಟೆ:(ಕೆಲೂರ)ಇಲಕಲ್ಲ ತಾಲೂಕಿನ ಕೆಲೂರ ಗ್ರಾಮದ ಶ್ರೀ ಗುರುಮಂಟೇಶ್ವರ ಪ್ರೌಢ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಶಾಲಾ ಆವರಣದಲ್ಲಿ ಸಸಿ ನೆಟ್ಟು, ಆಮ್ಲಜನಕದ ಮಹತ್ವ ಪ್ರತಿಯೊಬ್ಬರು ಮನೆ ಮುಂದೆ ಒಂದು ಮರ ಬೆಳೆಸಿ ಮಕ್ಕಳಿಗೆ ಸುಂದರ ಪರಿಸರ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಪ್ರೌಢ ಶಾಲೆ ಮುಕ್ಯೋಪಾಧ್ಯಾಯರಾದ ಶ್ರೀ ಎಸ್. ಬಿ ದಾಸರ ಮನವಿ ಮಾಡಿದರು.ಈ ಸಂದರ್ಭದಲ್ಲಿ ಶಾಲೆಯ ಪ್ರಕೃತಿ ಇಕೋ ಕ್ಲಬ್ ಸಂಚಾಲಕರಾದ ಎಸ್. ಬಿ. ಯಾವಗಲ್ಲಮಠ ಉಪಸ್ಥಿತರಿದ್ದರು.

Be the first to comment

Leave a Reply

Your email address will not be published.


*