ರಾಜ್ಯ ಸುದ್ದಿ
ದೇವನಹಳ್ಳಿ ಜೂ5: ಬೆಂಗಳೂರು ಗ್ರಾಮಾಂತರ ದೇವನಹಳ್ಳಿಯ ಕುಂದಾಣ ಹೋಬಳಿಯ ಕುಂದಾಣದಲ್ಲಿ ಶಾಸಕ ಎಲ್ ಎನ್ ನಿಸರ್ಗ ನಾರಾಯಣ ಸ್ವಾಮಿ, ಅವರು ಸಸಿ ನೆಡುವ ಕಾರ್ಯಕ್ರಮ ನೆರವೇರಿಸಿದರು.ಪರಿಸರ ದಿನಾಚರಣೆಯ ಅಂಗವಾಗಿ, ಕುಂದಾಣದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಆವರಣದಲ್ಲಿ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಶಾಸಕ ನಿಸರ್ಗ ನಾರಾಯಣ ಸ್ವಾಮಿ ಅವರು
, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ, ಪ್ರತಿಯೊಬ್ಬರು ಗಿಡ ನೆಡುವ ಹವ್ಯಾಸ ಬೆಳೆಸಿಕೊಳ್ಳಬೇಕು, ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ಬಳಕೆ ಮಾಡಬಾರದು, ವಾತಾವರಣವನ್ನು ಸ್ವಚ್ಛವಾಗಿಡುವುದರ ಮೂಲಕ ಆರೋಗ್ಯದ ರಕ್ಷಣೆಗೆ ಕಾಳಜಿ ವಹಿಸಬೇಕು ಎಂದರು.
ಈ ಸಂದರ್ಭದಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ 26 ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ಅಳವಡಿಸುವ ಕಾರ್ಯಕ್ರಮಕ್ಕೆ ಶಾಸಕರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕುಂದಾಣ ಗ್ರಾಮ ಪಂಚಾಯಿತಿ ಅಧ್ಯಕ್ಷ ನಾರಾಯಣ ಸ್ವಾಮಿ, ಜೆಡಿಎಸ್ ಮುಖಂಡ ಆನಂದ್ ಗೌಡ,ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಜಿ.ಎ.ರವೀಂದ್ರ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಮುನಿರಾಜು, ಪುರಸಭೆ ಸದಸ್ಯ ರುದ್ರೇಶ್ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾನ್ಸುಪಾಲರಾದ ವೆಂಕಟೇಶ್ ಮತ್ತಿತರರು ಇದ್ದರು.
Be the first to comment