ಜಿಲ್ಲಾ ಸುದ್ದಿಗಳು
ಬಾಗಲಕೋಟೆ : ಅಸಂಘಟಿತ ವಲಯದ ಕಾರ್ಮಿಕರಾದ ಅಗಸರು, ಕ್ಷೌರಿಕರು, ಗೃಹ ಕಾರ್ಮಿಕರು, ಟೇಲರ್‍ಗಳು, ಮೇಕ್ಯಾನಿಕ್, ಹಮಾಲರು, ಅಕ್ಕಸಾಲಿಗರು, ಕಮ್ಮಾರರು, ಮಂಡಕ್ಕಿ ಭಟ್ಟಿ ಕಾರ್ಮಿಕರು ಮತ್ತು ಚಿಂದಿ ಆಯುವವರು ಸಹಾಯಧನ ಪಡೆಯಲು ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ನಿಗಧಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಆಧಾರ ಕಾರ್ಡ, ವಿಳಾಸ ದೃಢೀಕರಣ ಪತ್ರ, ಮೋಬೈಲ್ ಸಂಖ್ಯೆ, ಜನ್ಮ ದಿನಾಂಕ, ನಮೂದಿಸಿದ ಪತ್ರ ಬಿ.ಪಿ.ಎಲ್ ಸಂಖ್ಯೆ, ಪಾಸ್ ಪೋರ್ಟ ಅಳತೆಯ ಭಾವಚಿತ್ರ, ಚಾಲ್ತಿಯಲ್ಲಿರುವ ಆಧಾರ ಕಾರ್ಡ ಜೋಡನೆಯಾಗಿರುವ ಬ್ಯಾಂಕ್ ಖಾತೆಯ ವಿವರಗಳು, ಸ್ವಯಂ ಘೋಷಣೆ ಮತ್ತು ಅರ್ಜಿದಾರರ ವೃತ್ತಿಯ ಕುರಿತು ಉದ್ಯೊಗ ಪ್ರಮಾಣ ಪತ್ರವನ್ನು ಸ್ಕ್ಯಾನ್ ಮಾಡಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅಪ್‍ಲೋಡ್ ಮಾಡಬೇಕು.
ಉದ್ಯೋಗ ದೃಢೀಕರಣ ಪತ್ರದ ನಮೂನೆಯ ಸೇವಾ ಸಿಂಧು ಪೋರ್ಟಲ್‍ನಲ್ಲಿ ಲಭ್ಯವಿದ್ದು, ಸದರಿ ಉದ್ಯೋಗ ಪ್ರಮಾಣ ಪತ್ರವನ್ನು ಕಂದಾಯ ಅಧಿಕಾರಿ, ಕಂದಾಯ ನಿರೀಕ್ಷಕರು, ಹಿರಿಯ ಆರೋಗ್ಯ ನಿರೀಕ್ಷಕರುಗಳು, ತಹಶೀಲ್ದಾರರು, ಉಪತಹಶೀಲ್ದಾರರು, ಪಂಚಾಯತ್ ಅಭಿವೃದ್ದಿ ಅಧಿಕಾರಿ, ಪಂಚಾಯತ್ ಕಾರ್ಯದರ್ಶಿ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು, ಕಾರ್ಮಿಕ ಇಲಾಖೆ ಅಧಿಕಾರಿಗಳು ಅಥವಾ ಯಾವುದೇ ಇಲಾಖೆಯ ಪತ್ರಾಂಕಿತ ಅಧಿಕಾರಿಗಳಿಂದ ಸಹಿ ಮಾಡಿಸಿ ಸೇವಾ ಸಿಂಧು ಪೋರ್ಟಲ್‍ನಲ್ಲಿ ಅಪ್ಲೋಡ್ ಮಾಡುವುದು.
2020ನೇ ಸಾಲಿನಲ್ಲಿ ಒಂದು ಬಾರಿಯ ನೇರವು ಪಡೆದ ಅಗಸರು ಮತ್ತು ಕ್ಷೌರಿಕರು ಹಾಗೂ ಕಾರ್ಮಿಕ ಇಲಾಖೆಯಲ್ಲಿ ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಮೇ 19 ವರೆಗೆ ನೋಂದಣಿಯಾದ ಅರ್ಹ ಕಾರ್ಮಿಕರ ಕುಟುಂಬದ ಓರ್ವರಿಗೆ ನೇರವಾಗಿ ಆಧಾರ ಆಧಾರಿತ ಬ್ಯಾಂಕ್ ಖಾತೆಗೆ ನಗದು ವರ್ಗಾವಣೆ ಮಾಡುವುದರಿಂದ ಸದರಿಯವರುಗಳು ಸೇವಾ ಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸುವ ಅಗತ್ಯ ಇರುವುದಿಲ್ಲ. ಆದರೆ ಕಳೆದ ಬಾರಿ ಸಹಾಯ ಧನ ಪಡೆಯದ ಉಳಿದ ಫಲಾನುಭವಿಗಳು ಹಾಗೂ ಯೋಜನೆಯಡಿ ಅಂಬೇಡ್ಕರ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ನೋಂದಣಿಯಾಗದ ಫಲಾನುಭವಿ ಕಾರ್ಮಿಕರು ಅರ್ಜಿಯನ್ನು ಸೇವಾ ಸಿಂಧು ಪೋರ್ಟಲ್‍ನಲ್ಲಿ ದಾಖಲೆಗಳೊಂದಿಗೆ ಅಪ್ಲೋಡ್ ಮಾಡುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Be the first to comment