ಬೆಂಗಳೂರು:ಹಿರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ ಸಿ.ಎಂ.ಉದಾಸಿ ಅವರ ನಿಧನಕ್ಕೆ ಉಪಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಎಂ ಕಾರಜೋಳ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ.
ಶ್ರೀ ಸಿ.ಎಂ.ಉದಾಸಿಯವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಉಳ್ಳ ಕ್ರಿಯಾಶೀಲ ರಾಜಕಾರಣಿ. ಈ ಹಿಂದೆ ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾದ ಕಾರ್ಯನಿರ್ವಹಿಸಿದ್ದಾರೆ. ರಾಜ್ಯದ ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಜನಪ್ರಿಯ ನಾಯಕರಾಗಿದ್ದರು. ಅವರ ನಿಧನದಿಂದ ಅಪರೂಪದ ಸಜ್ಜನಿಕೆಯ ನೇತಾರರೊಬ್ಬರನ್ನು ರಾಜ್ಯ ಕಳೆದುಕೊಂಡಂತಾಗಿದೆ.
ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಿ, ಅವರ ಕುಟುಂಬದವರಿಗೆ ಅಭಿಮಾನಿ ಬಳಗಕ್ಕೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಡಿಸಿಎಂ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Be the first to comment