ಕೆಲೂರ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದಾದ್ಯಂತ ಸ್ಯಾನಿಟೈಸರ್ ಸಿಂಪಡಣೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ: (ಕೆಲೂರ) ಕೊರೊನಾ ಮಹಾಮಾರಿ 2ನೇ ಅಲೆಯ ವೈರಸನ್ನು ತಡೆಗಟ್ಟುವ ಸಲುವಾಗಿ ಸಾರ್ವಜನಿಕರಲ್ಲಿ ಕೋವಿಡ್ ಸೋಂಕಿನ ಬೀತಿ ಎದುರಾಗಿದ್ದು ಈ ಬಾರಿ ಗ್ರಾಮೀಣ ಭಾಗದಲ್ಲಿ ಸೊಂಕಿತರ ಪ್ರಕರಣ ಜಾಸ್ತಿಯಾಗುತ್ತಿರುವ ಕಾರಣ ಗ್ರಾಮೀಣ ಭಾಗದ ಪ್ರತಿಯೊಂದು ಗ್ರಾಮ ಬಡಾವಣೆಗಳಲ್ಲಿ ಸೊಂಕಿತರು ರಸ್ತೆಯಲ್ಲಿ ಓಡಾಡಿದ ಪ್ರಯುಕ್ತ ಸ್ಯಾನಿಟೈಸರ್ ಸಿಂಪಡಣೆ ಮಾಡುವ ಮೂಲಕ ಜನರಲ್ಲಿ ಕೋವಿಡ್ ಭೀತಿ ದೂರಮಾಡಲು ಗ್ರಾಮದಾದ್ಯಂತ ಗ್ರಾ.ಪಂ ವತಿಯಿಂದ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.

ಸದಾ ಒಂದಿಲ್ಲೊಂದು ಕಾರ್ಯದಲ್ಲಿ ತೊಡಗಿಸಿಕೊಳ್ಳುತ್ತಿರುವ ಉತ್ಸಾಹಿ ಗ್ರಾ.ಪಂ ಅಧ್ಯಕ್ಷರು,ಸದಸ್ಯರು, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿಗಳು, ಗ್ರಾಮದ ಹಿರಿಯರ ಮಾರ್ಗದರ್ಶನದೊಂದಿಗೆ ಟಂಟಂ ವಾಹನದಲ್ಲಿ ಸ್ಯಾನಿಟೈಸರ್ ಸಿಂಪಡಣೆ ಯಂತ್ರದ ಮೂಲಕ ಗ್ರಾಮದ ಎಲ್ಲ ಬೀದಿಗಳಲ್ಲಿ ಸ್ಯಾನಿಟೈಸರ್ ಸಿಂಪಡಣೆ ಮಾಡಲಾಯಿತು.

Be the first to comment

Leave a Reply

Your email address will not be published.


*