ನಿರ್ಮಿತಿ ಕೇಂದ್ರ : ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕೋವಿಡ್ ಲಸಿಕೆ

ವರದಿ: ಶರಣಪ್ಪ ಹೆಳವರ ಬಾಗಲಕೋಟೆ

ಜಿಲ್ಲಾ ಸುದ್ದಿಗಳು

ಬಾಗಲಕೋಟೆ:ರ್ಮಿತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಕಟ್ಟಡ ನಿರ್ಮಾಣದಲ್ಲಿ ಕೆಲಸ ಮಾಡುತ್ತಿರುವ ವಿವಿಧ ಕಾರ್ಮಿಕರು ಹಾಗೂ ಅವರ ಅವಲಂಬಿತರು ಸೇರಿ ಒಟ್ಟು 120 ಜನರಿಗೆ ಕೋವಿಡ್ ಲಸಿಕೆ ನೀಡಲಾಯಿತು.

ಕಾರ್ಮಿಕ ಸಮುದಾಯದ ಆರೋಗ್ಯ ಹಿತರಕ್ಷಣೆ ಮನಗಂಡ ಶಾಸಕ ವೀರಣ್ಣ ಚರಂತಿಮಠ ಹಾಗೂ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ.ಕೆ.ರಾಜೇಂದ್ರ ಅವರ ನಿರ್ದೇಶನದಂತೆ ವಿದ್ಯಾಗಿರಿಯ ನಿರ್ಮಿತಿ ಕೇಂದ್ರದ ಕಚೇರಿ ಆವರಣದಲ್ಲಿ ಕಟ್ಟಡ ನಿರ್ಮಾಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು, ಎಲೆಕ್ಟ್ರೀಶಿಯನ್, ಬಾರ್ ಬೆಂಡಿಂಡ್ ವರ್ಕರ್ಸ್, ಕ್ಲೀನರ್, ಟ್ಯಾಕ್ಟರ್ ಹಾಗೂ ಇನ್ನೀತರ ವಾಹನಗಳ ಚಾಲಕರು, ಕಾರ್ಪೆಂಟರ್, ಪೆಂಟರ್‍ಗಳಿಗೆ ಹಾಗೂ ನಿರ್ಮಿತಿ ಕೇಂದ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಹಾಗೂ ಅವರ ಅವಲಂಬಿತರಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದೆ ಎಂದು ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ಶಂಕರಲಿಂಗ ಗೋಗಿ ತಿಳಿಸಿದರು.

ಇದೇ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಅರವಿಂದ ಪಟ್ಟಣಶೆಟ್ಟಿ, ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾಧಿಕಾರಿ ಸುಧಾಕರ ಬಡಿಗೇರ, ಕಾರ್ಮಿಕ ನಿರೀಕ್ಷಕ ಅವಿನಾಶ ನಾಯಕ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಹುಲ್ ಜೋಶಿ ಸೇರಿದಂತೆ ಇತರರು ಇದ್ದರು.

Be the first to comment

Leave a Reply

Your email address will not be published.


*