ರಸ್ತೆಗೆ ಅಡ್ಡ ಬಿದ್ದ ಬೃಹತ್ ಮರ; ರತ್ನಾಕರ ನಾಯ್ಕ ಸಾಮಾಜಿಕ ಕಾರ್ಯಕ್ಕೆ ಸ್ಥಳೀಯರ ಮೆಚ್ಚುಗೆ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಕುಮಟಾ: ವಿಪರೀತ ಗಾಳಿ-ಮಳೆಗೆ ತಾಲೂಕಿನ ಹೊಲನಗದ್ದೆಯ ಮುಖ್ಯ ರಸ್ತೆಗೆ ಅಡ್ಡವಾಗಿ ಬಿದ್ದ ಬೃಹತ್ ಮರವೊಂದನ್ನು ಸ್ಥಳೀಯರ ಸಹಕಾರದಿಂದ ಕೇವಲ ಅರ್ಧ ಗಂಟೆಯಲ್ಲಿಯೇ ತೆರವುಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಿ.ಪಂ ಸದಸ್ಯ ರತ್ನಾಕರ ನಾಯ್ಕ ಅವರ ಸಾಮಾಜಿಕ ಕಾರ್ಯಕ್ಕೆ ಸ್ಥಳೀಯರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ತಾಲೂಕಿನ ಹೊಲನಗದ್ದೆ ಗ್ರಾಮ ಪಂಚಾಯತ ಕಚೇರಿಯ ಸಮೀಪದ ಮುಖ್ಯ ರಸ್ತೆಯಲ್ಲಿ ಗಾಳಿ ಮಳೆಗೆ ಬೃಹತ್ ಮರವೊಂದು ಧರೆಗುರುಳಿ, ಸಂಚಾರಕ್ಕೆ ತೊಂದರೆಯಾಗಿತ್ತು. ಮೂರ್ನಾಲ್ಕು ವಿದ್ಯುತ್ ಕಂಬಗಳಿಗೂ ಹಾನಿಯಾಗಿ, ಆ ಭಾಗದಲ್ಲಿ ವಿದ್ಯುತ್ ಸಮಸ್ಯೆಯಾಗಿತ್ತು. ಈ ಬಗ್ಗೆ ಸ್ಥಳೀಯರು ಜಿ.ಪಂ ಸದಸ್ಯ ರತ್ನಾಕರ ನಾಯ್ಕ ಅವರಿಗೆ ಮಾಹಿತಿ ನೀಡುತ್ತಿದ್ದಂತೆ ಸ್ಥಳಕ್ಕಾಗಿಮಿಸಿದ ಅವರು, ತ್ವರಿತವಾಗಿ ಅರಣ್ಯ ಇಲಾಖೆ, ಹೊಲನಗದ್ದೆ ಗ್ರಾ.ಪಂ ಪಿಡಿಒ ಮತ್ತು ಹೆಸ್ಕಾಂ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳೀಯರ ಸಹಕಾರದಿಂದ ರಸ್ತೆಗೆ ಅಡ್ಡವಾಗಿ ಬಿದ್ದ ಮರವನ್ನು ತೆರುವುಗೊಳಿಸಿ, ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಅಲ್ಲದೇ, ಶೀಘ್ರದಲ್ಲೇ ವಿದ್ಯುತ್ ಪೂರೈಕೆ ಮಾಡುವ ಬಗ್ಗೆ ಅಗತ್ಯ ಕ್ರಮವಹಿಸುವಂತೆ ರತ್ನಾಕರ ನಾಯ್ಕ ಹೆಸ್ಕಾಂ ಸಿಬ್ಬಂದಿಗಳಿಗೆ ಸೂಚಿಸಿದರು. ಸಾರ್ವಜನಿಕರ ಸಮಸ್ಯೆಗೆ ತುರ್ತಾಗಿ ಸ್ಪಂದಿಸಿ, ತುರ್ತು ಕಾರ್ಯಾಚರಣೆ ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಜಿ.ಪಂ ಸದಸ್ಯ ರತ್ನಾಕರ ನಾಯ್ಕ, ಹೊಲನಗದ್ದೆ ಗ್ರಾ.ಪಂ ಮಾಜಿ ಅಧ್ಯಕ್ಷ ಮತ್ತು ಹಾಲಿ ಸದಸ್ಯ ರಾಘವೇಂದ್ರ ಪಟಗಾರ, ಸದಸ್ಯ ಮಾಂತೇಶ, ಅರಣ್ಯ ಇಲಾಖೆ, ಹೆಸ್ಕಾಂ ಸಿಬ್ಬಂದಿ ಮತ್ತು ಗ್ರಾ.ಪಂ ಪಿಡಿಒ ಅವರ ಕಾರ್ಯಕ್ಕೆ ಸಾರ್ವಜನಿಕರು ವ್ಯಾಪಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ

Be the first to comment

Leave a Reply

Your email address will not be published.


*