ರಾಜ್ಯ ಸುದ್ದಿ
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಾಂಗ್ಲಾದೇಶದ ಕೆಲವು ಅಕ್ರಮ ವಲಸಿಗರು ನೆಲೆಸಿರುವ ಬಗ್ಗೆ ಮಾಹಿತಿ ಇದ್ದು, ಅಂತಹವರನ್ನು ರಾಜ್ಯದಿಂದ ಹೊರಕ್ಕಟ್ಟುವ ಪ್ರಯತ್ನ ಸರ್ಕಾರ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.ರಾಜ್ಯದಲ್ಲಿ ವಲಸೆ ಬಂದು ಅಕ್ರಮವಾಗಿ ನೆಲೆಯೂರುತ್ತಿರುವವರ ಸಂಖ್ಯೆ ಅಧಿಕವಾಗಿದೆ. ಇನ್ನೂ ಹಲವು ಜನರು ಅಕ್ರಮ ಪ್ರವೇಶಿಸಿ ಇಲ್ಲೇ ನೆಲೆಯೂರಲು ಪ್ರಯತ್ನ ನಡೆಸುತ್ತಿರುವುದು ಕಂಡುಬರುತ್ತಿದ್ದು, ಅಂತಹವರನ್ನು ಪತ್ತೆ ಹಚ್ಚುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ನಿವೇಶನ ರಹಿತರಿಗೆ ನಿವೇಶನ ಹಂಚಿಕೆ ಸಂಬಂಧ ಮಾತನಾಡಿರುವ ಅವರು, ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ರಾಜ್ಯದಲ್ಲಿ ಯಾರೊಬ್ಬರೂ ನಿವೇಶನ ರಹಿತರಾಗಿ ಇರಬಾರದು. ಇನ್ನೆರಡು ವರ್ಷದಲ್ಲಿ ಎಲ್ಲರೂ ನಿವೇಶನ ಹೊಂದುವಂತೆ ಅಗತ್ಯ ಕ್ರಮ ವಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
Be the first to comment