ಮಂಗಳೂರಿನ ಮರವೂರು ಸೇತುವೆ ನಗರದಿಂದ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಅತ್ಯಂತ ಪ್ರಮುಖ ಸೇತುವೆಯೆ ಬಿರುಕು ಬಿಟ್ಟಿದೆ ಕುಸಿಯುವ ಭೀತಿ ಎದುರಾಗಿ ರಸ್ತೆ ಸಂಚಾರ ಬಂದ್ ಆಗಿದೆ. 

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ 

CHETAN KENDULI

ಮಂಗಳೂರು- ವಿಪರೀತ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾದ ಕಾರಣ ಮರವೂರು ಸೇತುವೆ ಕುಸಿತಕ್ಕೊಳಗಾಗಿದ್ದು, ಮಾನ್ಯ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರ ಜೊತೆ ಶಾಸಕ ಡಾ. ಭರತ್ ಶೆಟ್ಟಿ ಹಾಗೂ ಶಾಸಕರಾದ ಉಮಾನಾಥ್ ಕೋಟ್ಯಾನ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವ ವಾಹನಗಳಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದ್ದು, ಬದಲಿ ರಸ್ತೆ ಕಾವೂರು, ಕುಳೂರು, ಕೆಬಿಎಸ್ ಜೋಕಟ್ಟೆ, ಪೋರ್ಕೋಡಿ, ಬಜಪೆ ಅಥವಾ ಪಚ್ಚನಾಡಿ, ವಾಮಂಜೂರು, ಗುರುಪುರ, ಕೈಕಂಬ, ಬಜಪೆ ಮಾರ್ಗವಾಗಿ ತೆರಳಬಹುದಾಗಿದೆ ಎಂದು ತಿಳಿಸಿದರು.

Be the first to comment

Leave a Reply

Your email address will not be published.


*