ಕರಾವಳಿ ಭಾಗದಲ್ಲಿ ಭಾರೀ ಮಳೆ; ಜೂ.17 ರವರೆಗೆ ರೆಡ್ ಅಲರ್ಟ್ ಘೋಷಣೆ

ವರದಿ-ಕುಮಾರ್ ನಾಯ್ಕ.ಭಟ್ಕಳ

ರಾಜ್ಯ ಸುದ್ದಿ

CHETAN KENDULI

 

ಕಾರವಾರ: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಮಲೆನಾಡು, ಕರಾವಳಿ ಭಾಗದಲ್ಲಿ ಭರ್ಜರಿ ಮಳೆಯಾಗುತ್ತಿದ್ದು, ಇನ್ನು 2 ದಿನಗಳ ಕಾಲ ಭಾರೀ ಮಳೆ ಸುರಿಯಲಿದೆ. ಭಾರೀ ಮಳೆಯಿಂದ ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಹಾಗೂ ಕರಾವಳಿ ಭಾಗದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಜೂನ್ 17ರವರೆಗೆ ರೆಡ್ ಅಲರ್ಟ್ ನಲ್ಲಿರುವ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ. ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಜಲಾಶಯಗಳಿಗೆ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತಿವೆ. ಧಾರಾಕಾರ ಮಳೆಯಿಂದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಏರಿದೆ. ಹೊಸನಗರ, ತೀರ್ಥಹಳ್ಳಿ, ಸಾಗರದಲ್ಲಿ ಭಾರಿ ಮಳೆಯಾಗುತ್ತಿದ್ದು ಲಿಂಗನಮಕ್ಕಿ ಜಲಾಶಯಕ್ಕೆ 13,173 ಕ್ಯೂಸೆಕ್ ನೀರು ಹರಿದುಬಂದಿದೆ. ಈ ವರ್ಷ ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿದ್ದ ನೈಋತ್ಯ ಮಾನ್ಸೂನ್ ಜೂನ್ 6ರಂದು ಕರ್ನಾಟಕವನ್ನು ಪ್ರವೇಶಿಸಿತ್ತು ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.

Be the first to comment

Leave a Reply

Your email address will not be published.


*